ನಿರೂಪಕಿ ಅನುಶ್ರೀಗೆ ಸಿಸಿಬಿ ಬುಲಾವ್

ಬೆಂಗಳೂರು: ಡ್ರಗ್ಸ್ ಕೇಸ್ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಸಮನ್ಸ್ ಜಾರಿ ಮಾಡಿದೆ.

ಡ್ರಗ್ಸ್ ರಾಕೆಟ್ ಪ್ರಕರಣದಲ್ಲಿ ದಿನಂದಿಂದ ದಿನಕ್ಕೆ ಸ್ಫೋಟಕ ತಿರುವು ಪಡೆದಿದ್ದು, ನಿತ್ಯ ಹೊಸ-ಹೊಸ ಹೆಸರುಗಳು ಕೇಳಿಬರುತ್ತಿವೆ.

ಇದೀಗ ನಿರೂಪಕಿ ಅನುಶ್ರೀ ಹೆಸರು ಡ್ರಗ್ಸ್ ಉರುಳಿನಲ್ಲಿ ಸಿಲುಕಿದ್ದು, ವಿಚಾರಣೆಗೆ ಹಾಜರಾಗುವಂತೆ ಮಂಗಳೂರು ಸಿಸಿಬಿ ಪೊಲೀಸರು ವಾಟ್ಸ್ಆ್ಯಪ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply