ಮಣಿಪಾಲ: ಅಡ್ಡದಿಡ್ಡಿ ಕಾರು ಚಲಾಯಿಸಿ ವಾಹನಗಳಿಗೆ ಡಿಕ್ಕಿ!

ಪರ್ಕಳದಿಂದ ಮಣಿಪಾಲ ಕಡೆಗೆ ಸಾಗುತ್ತಿದ್ದ ಕಾರಿನ ಅಡ್ಡಾದಿಡ್ಡಿ ಚಲನೆಯಿಂದಾಗಿ ಇತರ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ.

ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದ ಕಾರು ನಂತರ ರಿವರ್ಸ್‌ ತೆಗೆಯುವಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಗೆ ಗಾಯವಾಗಿದೆ.

ಇನ್ನು ಪರ್ಕಳದಿಂದ ಬರುವಾಗಲೆ ಅಡ್ಡಾದಿಡ್ಡಿ ಚಲಾಯಿಸಿ ಕಾರು ಕೆಲವು ವಾಹನಗಳಿಗೆ ಢಿಕ್ಕಿ ಹೊಡೆಸಿ ಹಾನಿಗೊಳಿಸಿದ್ದು, ಮಣಿಪಾಲದಲ್ಲಿ ಯುಟರ್ನ್ ಮಾಡಿಕೊಂಡು ಪರ್ಕಳ ಕಡೆಗೆ ಪರಾರಿಯಾಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಮಾಹಿತಿಯ ಪ್ರಕಾರ ಪರ್ಕಳ ಸಮೀಪ ಕಾರು ನಿಲ್ಲಿಸಿದ ಮೂವರು ಅಪರಿಚಿತರು ಸಮೀಪದ ಕಾಡಿನೊಳಗೆ ನುಗ್ಗಿ ಪರಾರಿಯಾಗಿದ್ದಾರೆ.

 
 
 
 
 
 
 
 
 
 
 

Leave a Reply