ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ : ಓರ್ವನ ಬಂಧನ

ಮಂಗಳೂರು : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ಇಂದು ನಡೆದಿದೆ.

ಬಂಧಿತನಿಂದ ಕೋಟ್ಯಾಂತರ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದು, ಆತ ಉಳ್ಳಲಾ ನಿವಾಸಿ ಮೊಹಮ್ಮದ್ ಆಸೀಫ್ ಎಂದು ತಿಳಿದು ಬಂದಿದೆ.ಆಸೀಫ್ ದುಬೈ ನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ. ತಪಾಸಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ 1.993 ಕೆಜಿ ಚಿನ್ನದ ಪೌಡರ್ ದೊರಕಿದೆ.

ಒಟ್ಟು 1.18 ಕೋಟಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಬಂಧಿತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

Leave a Reply