Janardhan Kodavoor/ Team KaravaliXpress
27.6 C
Udupi
Wednesday, August 17, 2022
Sathyanatha Stores Brahmavara

ಬಾಲಕಾರ್ಮಿಕ/ಕಿಶೋರ ಕಾರ್ಮಿಕರ ನೇಮಕ ಅಪರಾಧ

ಉಡುಪಿ: ಉಡುಪಿ ಜಿಲ್ಲೆಯಲ್ಲಿ​ ​ಕೋವಿಡ್-19 ರ ಹಿನ್ನೆಲೆ ಆರ್ಥಿಕ ಮತ್ತು ಕಾರ್ಮಿಕ ಮಾರುಕಟ್ಟೆಯ ಆಘಾತವು ಜನರ ಜೀವನ ಹಾಗೂ ಜೀವನೋಪಾಯದ ಮೇಲೆ ಪರಿಣಾಮ ಬೀರಿದ್ದು, ಈ ಬಿಕ್ಕಟ್ಟು ಸಾವಿರಾರು ದುರ್ಬಲ ಮಕ್ಕಳನ್ನು ಬಾಲ್ಯಾವಸ್ಥೆಯ ಹಾಗೂ​ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಗೆ ತಳ್ಳಬಹುದಾದುರಿಂದ ಹೋಟೆಲ್, ಬಾರ್, ಅಂಗಡಿಗಳಲ್ಲಿ ದುಡಿಸಿಕೊಳ್ಳುತ್ತಿರುವ ಸಾಧ್ಯತೆಗಳಿರುತ್ತದೆ.

ಆದ್ದರಿಂದ ಬಾಲ್ಯಾವಸ್ಥೆಯ/ಕಿಶೋರಾವಸ್ಥೆಯ​ ಕಾರ್ಮಿಕರನ್ನು ಕೆಲಸಕ್ಕೆ ನೇಮಕವಾಗದಂತೆ​ ಕ್ರಮವಹಿಸಲು ಕಾರ್ಮಿಕ ಇಲಾಖೆ, ಉಡುಪಿ ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಉಡುಪಿ ಇವರ ಸಹಭಾಗಿತ್ವ ದಲ್ಲಿ ಈಗಾಗಲೇ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ​ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಅನಿರೀಕ್ಷಿತ ತಪಾಸಣೆ ಯನ್ನು ಹಮ್ಮಿಕೊಳ್ಳಲಾಗುತ್ತಿದೆ ಹಾಗೂ​ ಅನೀರಿಕ್ಷಿತ ತಪಾಸಣೆ ನಡೆಸಿದ ಸಂದರ್ಭದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಕಾಯ್ದೆಯ ಪ್ರಕಾರ ಎಲ್ಲಾ ಉದ್ಯೋಗ ಮತ್ತು​ ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಲಾಗಿದೆ. 15 ರಿಂದ 18 ವರ್ಷದೊಳಗಿನ​ ಕಿಶೋರ ರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ನಿಷೇಧಿಸಿದೆ.

ಬಾಲಕಾರ್ಮಿಕ/ಕಿಶೋರ ಕಾರ್ಮಿಕರನ್ನು​ ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20,000 ರೂ. ದಿಂದ 50,000 ರೂ. ವರೆಗೆ ದಂಡಅಥವಾ ಎರಡನ್ನು ವಿಧಿಸಲು ಈ ಕಾಯ್ದೆಯಡಿ​ ಅವಕಾಶವಿರುತ್ತದೆ.

14 ವರ್ಷದೊಳಗಿನ ಮಕ್ಕಳನ್ನು ಹಾಗೂ 15 ರಿಂದ 18​ ವರ್ಷದೊಳಗಿನ ವಯಸ್ಸಿನ ಕಿಶೋರ ಕಾರ್ಮಿಕರನ್ನು ದುಡಿಸುತ್ತಿದ್ದಲ್ಲಿ ಮಾಹಿತಿಯನ್ನು ಚೈಲ್ಡ್ ಲೈನ್ 1098 ಅಥವಾ 0820-2574851/ 0820-2574977 ದೂರವಾಣಿ ಸಂಖ್ಯೆಗಳಿಗೆ ಕರೆಮಾಡಿ ತಿಳಿಸಬಹುದಾಗಿದೆ ಎಂದು​ ಕಾರ್ಮಿಕ ಅಧಿಕಾರಿ ಕುಮಾರ್.ಬಿ. ತಿಳಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!