Janardhan Kodavoor/ Team KaravaliXpress
23.4 C
Udupi
Saturday, February 4, 2023
Sathyanatha Stores Brahmavara

90ವರ್ಷದ ವೃದ್ಧೆಯನ್ನು ಅರಣ್ಯದಲ್ಲಿ ಬಿಟ್ಟು ಹೋದ ಪಾಪಿ ಕುಟುಂಬಸ್ಥರು

90 ವರ್ಷದ ವೃದ್ಧೆಯೊಬ್ಬರನ್ನು ಕುಟುಂಬಸ್ಥರು ದಟ್ಟ ಅರಣ್ಯದಲ್ಲಿ ಬಿಟ್ಟು ಹೋದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿ ನಲ್ಲಿ ನಡೆದಿದೆ. ರುಮೇವಾಡಿ ಗ್ರಾಮದ ರೈತ ರಾಜು ಘಾಡಿ ಎಂಬವರು ಸೋಮವಾರ ಕಾಡಿನ ದಾರಿಯಲ್ಲಿ ಹೊರಟಿದ್ದರು. ಆಗ ವೃದ್ಧೆ ನರಳುವುದು ಕೇಳಿಸಿತು.

ನಿತ್ರಾಣ ಸ್ಥಿತಿಯಲ್ಲಿ ವೃದ್ಧೆ ಸೋಮವಾರ ಪತ್ತೆಯಾಗಿದ್ದು, ಹತ್ತಿರ ಹೋಗಿ ನೋಡಿದ ಅವರು ಅಜ್ಜಿಗೆ ನೀರು ಕುಡಿಸಿ ಉಪಚರಿಸಿದರು. ತಮ್ಮ ಟ್ರ್ಯಾಕ್ಟರ್‌ನಲ್ಲಿ ಅವರನ್ನು ಹತ್ತಿರದ ಢಾಬಾಗೆ ಕರೆತಂದರು. ಢಾಬಾ ಮಾಲೀಕ ಅನಂತ ಜುಂಜವಾಡಕರ, ಉದಯ ಕೋಳೇಕರ ಅವರು ಆಂಬುಲೆನ್ಸ್‌ ಕರೆಸಿ, ತಾಲೂಕು ಆಸ್ಪತ್ರೆಗೆ ದಾಖಲಿಸಿ ದರು ಎನ್ನಲಾಗಿದೆ.
ತೀವ್ರ ನಿತ್ರಾಣಗೊಂಡ ಅವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ತಾನು ಮುಧೋಳದವಳು ಎಂದಷ್ಟೇ ಹೇಳಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜೀವ ನಾಂದ್ರೆ ತಿಳಿಸಿದ್ದಾರೆ. ವೃದ್ಧೆಯನ್ನು ಬಿಟ್ಟು ಹೋದ ಸ್ಥಳದಲ್ಲಿ ಅವರ ಬಟ್ಟೆ, 3 ಸಾವಿರ ಹಣ ಮಾತ್ರ ಸಿಕ್ಕಿದೆ. ಗುರುತಿನಚೀಟಿ, ವಿಳಾಸ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!