ಭೀಕರ ಅಪಘಾತ ಪ್ರಕರಣ; ಪರಾರಿಯಾಗಿದ್ದ ಕಾರು ಚಾಲಕ ತುಳು ಸ್ಟ್ಯಾಂಡ್ ಅಪ್ ಕಾಮಿಡಿಯನ್ ಅರ್ಪಿತ್ ಬಂಧನ!

ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ
ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ
ಮಧ್ಯರಾತ್ರಿ ಕಾರು ಡಿಕ್ಕಿ ಹೊಡೆದು ನಡೆದ ಭೀಕರ
ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ
ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಚಾಲಕನನ್ನು ಬಂಧಿಸಿದ್ದಾರೆ.

ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದ್ರ ನಗರ
ನಿವಾಸಿ ಅರ್ಪಿತ್ ಎಂದು ಗುರುತಿಸಲಾಗಿದ್ದು ಈತ ತುಳು
ಸ್ಟ್ಯಾಂಡ್ ಅಪ್ ಕಾಮಿಡಿ ಯೂಟ್ಯೂಬರ್ ಎಂದು ತಿಳಿದು
ಬಂದಿದೆ.

ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ
ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್
ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯಪ್ರದೇಶ
ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂಕೇರಳ ನಿವಾಸಿಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿbಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು.

ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು
ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ
ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಡಿಕ್ಕಿ ಹೊಡೆದು
ಪರಾರಿಯಾಗಿತ್ತು.

 
 
 
 
 
 
 
 
 
 
 

Leave a Reply