ವಿದ್ಯಾರ್ಥಿಯ ಮೇಲೆ ಹಲ್ಲೆ; 9 ಮಂದಿ ಆರೋಪಿಗಳ ಬಂಧನ‌

ಹಿಂದೂ ವಿದ್ಯಾರ್ಥಿನಿಯೊಂದಿಗೆ ಆಪ್ತನಾಗಿದ್ದಾನೆ ಎಂಬ ಕಾರಣಕ್ಕೆ ಅನ್ಯಕೋಮಿನ‌ ವಿದ್ಯಾರ್ಥಿ ಮೇಲೆ ಹಲ್ಲೆ ನಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.

ಹಲ್ಲೆಗೊಳಗಾದ ಸನೀಫ್ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆ ದೂರಿನ ಅನ್ವಯ ಪೊಲೀಸರು ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್,   ಚರಣ್, ಮತ್ತು ಪವನ್ ‌ನನ್ನು ಬಂಧಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್  ಸೋನಾವಣೆ ಮಾಹಿತಿ ನೀಡಿದ್ದಾರೆ. ಬಂಧಿತರ ವಿರುದ್ಧ ಐಪಿಸಿ ಕಲಂ 143, 147, 148, 323, 324, 506 ಜೊತೆಗೆ 149ರಂತೆ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply