ವೀಡಿಯೋ ಮಾಡದಂತೆ ವಿದೇಶಿ ಪ್ರಜೆ ಮೇಲೆ ಬೆಂಗಳೂರಿನಲ್ಲಿ ಹಲ್ಲೆಗೆ ಯತ್ನಿಸಿದ ಪುಂಡ!

ಭಾರತದ ಪ್ರವಾಸಕ್ಕೆ ಬಂದಿರುವ ವಿದೇಶಿ ಪ್ರವಾಸಿಗರೊಬ್ಬರಿಗೆ ಬೆಂಗಳೂರಿನಲ್ಲಿ ಪುಂಡನೊಬ್ಬ ಕಿರುಕುಳ ನೀಡಿದ ಘಟನೆ ನಡೆದಿದೆ.

ನೆದರ್ಲ್ಯಾಂಡ್ ಮೂಲದ ಮ್ಯಾಡ್ಲಿ ರೋವರ್ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವೀಡಿಯೋ ಮಾಡುತ್ತಾ ಸುತ್ತುತ್ತಿದ್ದರು. ಸಂಡೇ ಬಜಾರ್‌ನಲ್ಲಿ ಸೆಲ್ಫಿ ವಿಡಿಯೋ ಮಾಡುತ್ತಿದ್ದಾಗ ಸ್ಥಳೀಯ ವ್ಯಕ್ತಿಯೊಬ್ಬ ವಿಡಿಯೋ ಮಾಡದಂತೆ ಹಲ್ಲೆಗೆ ಯತ್ನಿಸಿದ್ದಾನೆ.

ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿದಾಡುತ್ತಿದ್ದಂತೆ ಬಹಳ ಟೀಕೆ ವ್ಯಕ್ತವಾಗಿದೆ. ನೆಟ್ಟಿಗರು ಖಂಡನೆ ವ್ಯಕ್ತಪಡಿಸಿ ಬೆಂಗಳೂರು ಪೊಲೀಸರಿಗೆ ಟ್ಯಾಗ್‌ ಮಾಡಿ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಟ್ವೀಟ್‌ ಮಾಡಿದ್ದಾರೆ.
ಅತಿಥಿ ದೇವೋ ಭವ ಎಂಬ ಪರಿಕಲ್ಪನೆ ಇರುವ ದೇಶದಲ್ಲಿ ದೌರ್ಜನ್ಯ ನಡೆದಿದೆ. ಪೊಲೀಸರು ಕೂಡಲೇ ಎಚ್ಚೆತ್ತು ಈ ರೀತಿ ಕಿರುಕುಳ ನೀಡುವ ಪುಂಡರಿಗೆ ಬಿಸಿ ಮುಟ್ಟಿಸಬೇಕೆಂದು ಜನ ಕಮೆಂಟ್‌ ಮಾಡುತ್ತಿದ್ದಾರೆ.
 
 
 
 
 
 
 
 
 
 
 

Leave a Reply