ಆಟೋ ರಿಕ್ಷಾದಲ್ಲಿ ದಾಖಲೆಗಳಿಲ್ಲದೆ 93.50 ಲಕ್ಷ ರೂ. ಅಕ್ರಮ ನಗದು ಸಾಗಾಟ: ಇಬ್ಬರು ವಶಕ್ಕೆ…!!

ಕುಮಟಾ ತಾಲೂಕಿನತ್ತ ಆಟೊ ರಿಕ್ಷಾದಲ್ಲಿ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 93.50 ಲಕ್ಷ ರೂ.ವನ್ನು ಫ್ಲೈಯಿಂಗ್ ಸ್ಕ್ವಾಡ್ ಶುಕ್ರವಾರ ಮುಂಜಾನೆ ಪತ್ತೆ ಹಚ್ಚಿ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಕುಮಟಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನಾವರ ತಾಲೂಕಿನ ಚೆಕ್ ಪೋಸ್ಟ್ ಬಳಿ ಶುಕ್ರವಾರ ನಸುಕಿನ 2:30ರ ವೇಳೆಗೆ ಈ ಹಣ ಸಾಗಾಟ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗದಿಂದ ಕುಮಟಾ ಕಡೆಗೆ ಯಾವುದೇ ದಾಖಲೆಗಳಿಲ್ಲದೆ ಈ ಹಣ ಸಾಗಾಟ ಮಾಡಲಾಗುತ್ತಿತ್ತು. ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ಮತ್ತೊಬ್ಬ ವ್ಯಕ್ತಿಯನ್ನು ಹಣ ಸಮೇತ ಎಸ್.ಎಸ್.ಟಿ. ತಂಡ ಮತ್ತು ಫ್ಲೈಯಿಂಗ್ ಸ್ಕ್ವಾಡ್ ವಶಕ್ಕೆ ಪಡೆದಿದೆ.
ವಶಪಡಿಸಿಕೊಂಡ ಹಣವನ್ನು ಕುಮಟಾದ ಉಪ ಖಜಾನೆಯಲ್ಲಿ ನಿಯಮಾನುಸಾರ ಇರಿಸಲಾಗಿದೆ. ಈ ಹಣ ಯಾರಿಗೆ ಸೇರಿದ್ದು, ಯಾವ ಪಕ್ಷಕ್ಕೆ ಸೇರಿದ್ದು ಎನ್ನುವುದು ತಿಳಿಸಿದು ಬಂದಿಲ್ಲ. ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply