ಅಕ್ರಮ ಚಟುವಟಿಕೆಗಳಿಗೆ ಕಡಿವಾಣ~ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ತಡೆಯುವ ಹಿನ್ನೆಲೆ ಪೊಲೀಸ್ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ. ಸದ್ಯ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್‌ಗಳನ್ನು ರಚಿಸಲಾಗಿದೆ. ಈ ಮೂಲಕ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಚಿಸಿದ್ದಾರೆ.

ಇದೀಗ ಜಿಲ್ಲೆಯಲ್ಲಿ ಬಹುತೇಕ ನಡೆಯುತ್ತಿರುವ ಅಕ್ರಮ ಗೋ ಸಾಗಾಟ, ಅನೈತಿಕ ಪೊಲೀಸ್‌ಗಿರಿ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಠಾಣಾಧಿಕಾರಿಗಳು ಗಮನಹರಿಸಬೇಕು ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ. ಆಯಾ ಠಾಣಾ ವ್ಯಾಪ್ತಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆದು ಅಲ್ಲಿ ಕಡ್ಡಾಯವಾಗಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಿಸಬೇಕು. ಯಾವುದೇ ಕಾರಣಕ್ಕೂ ಸಿಬ್ಬಂದಿಯ ಸಂಖ್ಯೆ ಕಡಿಮೆ ಇದೆ ಎಂದು ನೆಪ ಹೇಳುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

 
 
 
 
 
 
 
 
 

Leave a Reply