ಬಾಲಕ ನಾಪತ್ತೆ

ಉಡುಪಿ:: ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಬಾಲಕನು ಏಪ್ರಿಲ್ 11 ರಂದು ಮನೆಯಿಂದ
ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯಾಗಿರುತ್ತಾನೆ.

4 ಅಡಿ 5 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ : 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply