2.69 ಕೋಟಿ ರೂ. ಲಪಟಾಯಿಸಿ ತಲೆಮರೆಸಿಕೊಂಡಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಅಂದರ್

ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿಯನ್ನು ಲಪಟಾಯಿಸಿ ತಲೆಮರೆಸಿಕೊಂಡಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಈ ಪ್ರಕರಣ ನಡೆದಿತ್ತು. ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಕುಮಾರ್ ಬೋನಾಲ್ ಎಂಬಾತ ಬ್ಯಾಂಕ್‌ನಿಂದಲೇ 2.69 ಕೋಟಿ ರೂ. ಲಪಟಾಯಿಸಿದ್ದ. ಆಂಧ್ರಪ್ರದೇಶ ಮೂಲದ ಈತ ಇನ್ನೊಬ್ಬ ಉದ್ಯೋಗಿಯ ಲಾಗಿನ್ ದುರ್ಬಳಕೆ ಮಾಡಿಕೊಂಡು 2.69 ಕೋಟಿ ರೂ.
ಲಪಟಾಯಿಸಿದ್ದ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಕುಮಾರ್ ಬೋನಾಲ್, ತಾನು ಲಪಟಾಯಿಸಿದ್ದ ಹಣವನ್ನು ಆನ್‌ಲೈನ್ ಗೇಮ್‌ನಲ್ಲಿ ಕಳೆದುಕೊಂಡಿರುವುದಾಗಿ ಪ್ರಾಥಮಿಕ ತನಿಖೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆ
ಮುಂದುವರಿಸಿದ್ದಾರೆ.

 
 
 
 
 
 
 
 
 
 
 

Leave a Reply