ಬ್ರಹ್ಮಾವರ ಚರ್ಚ್ ಗೆ ಕನ್ನ ಹಾಕಿದ ಖದೀಮರು

ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ ಕಚೇರಿಯಲ್ಲಿ ಕಳ್ಳತನದ ಸುದ್ದಿ ವರದಿಯಾಗಿದ್ದು ಸುಮಾರು 88,000 ಸಾವಿರ ರೂಪಾಯಿಯನ್ನು ಕಳ್ಳತನ ಮಾಡಲಾಗಿದೆ. ಕಿಟಕಿ ಬಾಗಿಲು ಮುರಿದು ಕೃತ್ಯ ಎಸಗಿದ್ದು ಸಿಸಿಟಿವಿಯಲ್ಲಿ ದೃಶ್ಯ ದಾಖಲಾಗಿದ್ದರೂ ಅಸ್ಪಷ್ಟವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಪೊಲೀಸರು ಶ್ವಾನದಳದೊಂದಿಗೆ ಬಂದು ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply