ಮಂಗಳೂರು ವಿಮಾನ ನಿಲ್ದಾಣದಲ್ಲಿ 90 ಲಕ್ಷ ರೂ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈ ನಿಂದ ಬಂದ ಪ್ರಯಾಣಿಕರಿಂದ ಕಳ್ಳ ಸಾಗಾಣಿಕೆ ಮಾಡಲಾಗುತ್ತಿದ್ದ 90 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.


ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 21 ತಿಂಗಳ ಹೆಣ್ಣು ಮಗುವಿನ ಡೈಪರ್ ನಲ್ಲಿ ತಂದೆ ಚಿನ್ನವನ್ನು ಮರೆಮಾಚಿ ಗುದ ನಾಳದಲ್ಲಿ ಮಾತ್ರೆಗಳ ರೂಪದಲ್ಲಿ ಬಚ್ಚಿಟ್ಟು ಕಳ್ಳ ಸಾಗಾಣಿಕೆ ಮಾಡುತ್ತಿರುವುದು ಸೆರೆಯಾಗಿದೆ. ಟ್ರಾಸರ್ ನ ಸೊಂಟಪಟ್ಟಿಯಲ್ಲಿ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡಲಾಗುತ್ತಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

 
 
 
 
 
 
 
 
 
 
 

Leave a Reply