ಕಾರು ಡಿಕ್ಕಿ : ಸೈಕಲ್ ಸವಾರ ಕೇಶವ ಮರಕಾಲ ಮೃತ್ಯು

ಕೋಟ: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಸಾಲಿಗ್ರಾಮ ಡಿವೈನ್ ಪಾರ್ಕ್ ಹತ್ತಿರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಗುಂಡ್ಮಿ ಭಗವತಿ ರಸ್ತೆಯ ನಿವಾಸಿ ಕೇಶವ ಮರಕಾಲ (41) ಎಂದು ತಿಳಿದು ಬಂದಿದೆ.

ಉಡುಪಿಯಿಂದ ಕುಂದಾಪುರ ಕಡೆಗೆ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದ ಚಾಲಕನ ನಿಯಂತ್ರಣ ತಪ್ಪಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಸೈಕಲ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಕಾರು ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

 
 
 
 
 
 
 
 
 
 
 

Leave a Reply