ಕೆಮ್ಮು,ಶೀತ, ಜ್ವರ ಲಕ್ಷಣವಿರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ-​ ​ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ​: ​ಶೀತ, ಕೆಮ್ಮು, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ​ ಕಡ್ಡಾಯವಾಗಿ ಕೋವಿಡ್ ಟೆಸ್ಟ್ಗಳನ್ನು ಮಾಡಿಸಬೇಕು, ತಪ್ಪಿದ್ದಲ್ಲಿ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ​ ನೊಂದಣಿಯನ್ನು ರದ್ದು ಮಾಡಲಾಗು ವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾ​​ಪ್ರಾಧಿಕಾರದ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.​ ಇತ್ತೀಚಿನ ದಿನ ಗಳಲ್ಲಿ ಜನರು ಕೋವಿಡ್ ಸೋಂಕಿನ ಬಗ್ಗೆ ನಿ​ನಿರ್ಲಕ್ಷ  ವಹಿಸುತ್ತಿದ್ದಾರೆ. ಇದರಿಂದಾಗಿ ಎರಡನೇ​ ಅಲೆ ಪ್ರಾರಂಭ ವಾಗುವ ಸಾಧ್ಯತೆಗಳಿವೆ. ಇದಕ್ಕೆ ಕಡಿವಾಣ ಹಾಕಬೇಕು. 
 
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಮ್ಮು,​ ಶೀತ, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆ ಪಡೆಯಲು ಬಂದಂತಹ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ​ ಮಾಡಿಸಬೇಕು. ಖಾಸಗಿ ವೈದ್ಯಕೀಯ ಸಂಸ್ಥೆಗಳು ರೋಗಿಗಳ ಬಗ್ಗೆ ನಿಖರ ಮಾಹಿತಿಯನ್ನು ನೀಡಬೇಕು ಎಂದರು.​ ಜಿಲ್ಲೆಯಲ್ಲಿ ವೈದ್ಯಕೀಯ ವೃತ್ತಿಯನ್ನು ಪ್ರಾರಂಭಿಸುವ ಮುನ್ನ ಜಿಲ್ಲಾ ಮಟ್ಟದ ನೋಂದಣಿ ಪ್ರಾಧಿಕಾರದಲ್ಲಿ​ ನೋಂದಣಿ ಮಾಡಿಸಿ, ತಮ್ಮ ವೃತ್ತಿಯನ್ನು ಕೈಗೊಳ್ಳಬೇಕು. ನೊಂದಣಿ ಮಾಡದೇ ಚಿಕಿತ್ಸೆ ನೀಡಿದವರ ಮೇಲೆ​ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ವಂಶ ಪಾರಂಪರೆಯಾಗಿ ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತಿದ್ದೇವೆ ಎಂಬ ಹೆಸರಿನಲ್ಲಿ ಔಷಧೋಪಚಾರಗಳನ್ನು​ ನೀಡುವಾಗ ಅಲೋಪಥಿ ಮೆಡಿಸನ್ ನೀಡುವುದು ಅಪರಾಧ. ಇಂತಹ ವೃತ್ತಿಗಳು ಕಂಡು​ ​​ಬಂದಲ್ಲಿ  ಕಾನೂನು ಅಡಿಯಲ್ಲಿ​ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ​​ಗಳಿಗೆ ಸೂಚನೆ ನೀಡಿದರು.

ಪ್ರಾಧಿಕಾರಕ್ಕೆ ಅಗತ್ಯ ದಾಖಲೆಗಳೊಂದಿಗೆ ಕ್ಲಿನಿಕ್ ಅಥವಾ ನರ್ಸಿಂಗ್ ಹೋಮ್‌ಗಳನ್ನು ತೆರೆಯಲು ಅರ್ಜಿ​ ಸಲ್ಲಿಸಿ ದಾಗ ನಿಯಮಾನುಸಾರ ಅವರುಗಳಿಗೆ ಶೀಘ್ರದಲ್ಲಿ ಲೈಸೆನ್ಸ್ ನೀಡಬೇಕೆಂದು ತಿಳಿಸಿದರು.​ ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಅಸಮತೋಲನ ಉಂಟಾಗ​ದಂತೆ ​ಎಚ್ಚರವಹಿಸಬೇಕು.
ಪ್ರಸ್ತುತ 1000 ಗಂಡು ಮಕ್ಕಳಿಗೆ, 956 ಹೆಣ್ಣು ಮಕ್ಕಳಿದ್ದಾರೆ. ಗರ್ಭಪೂರ್ವ ಮತ್ತು ಪ್ರಸವ​ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಅಂತಹ ಅಪರಾಧಕ್ಕೆ 3 ವರ್ಷ ಜೈಲು ಶಿಕ್ಷೆ​ ವಿಧಿಸಲಾಗುವುದು ಎಂದರು.

​ಸ್ಕ್ಯಾನಿಂಗ್  ಸೆಂಟರ್‌ಗಳಲ್ಲಿ ಸರ್ಕಾರದ ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಎಂದ ಅವರು ಜಿಲ್ಲಾ​ ಮಟ್ಟದ ಸಮಿತಿಗಳು ಆಗಿಂದಾಗ್ಗೆ ಅನಿರೀಕ್ಷಿತ ಭೇಟಿಗಳನ್ನು ನೀಡುವುದರೊಂದಿಗೆ ಅಲ್ಲಿನ ಚಟುವಟಿಕೆಗಳ ಮೇಲೆ ನಿಗಾವಹಿಸ ಬೇಕು ಎಂದರು.​ ಸಾರ್ವಜನಿಕರು ಯಾವುದೇ ​ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಭ್ರೂಣಲಿಂಗದ ಪತ್ತೆಮಾಡಿ ಮಾಹಿತಿ ನೀಡುತ್ತಾರೆ​ ಎಂಬ ನಿಖರ ಮಾಹಿತಿ ಕೊಟ್ಟಲ್ಲಿ ಅಂತಹವರಿಗೆ 50,000 ರೂ. ಬಹುಮಾನ ನೀಡಲಾಗುವುದು ಎಂದರು.

ಆಸ್ಪತ್ರೆಗಳಲ್ಲಿನ ಬಯೋ- ಮೆಡಿಕಲ್ ತ್ಯಾಜ್ಯಗಳನ್ನು 48 ಗಂಟೆಗಳ ಒಳಗಾಗಿ ಶೇಖರಿಸುವುದರೊಂದಿಗೆ ವೈಜ್ಞಾನಿಕರೀತಿಯಲ್ಲಿ ಅವುಗಳನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಿದ ಅವರು ಅವುಗಳ ಶೇಖರಣೆಯ ಬಗ್ಗೆ ಬಾರ್‌ಕೋಡ್ವ್ಯವಸ್ಥೆಯನ್ನು ಮಾಡುವುದು ಸೂಕ್ತ ಎಂದರು.​ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದು ಸೇರಿದಂತೆ ಅಲ್ಲಿನ ಮೂಲಭೂತ ಸೌಕರ್ಯಗಳ​ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಸೂಚನೆ ನೀಡಿದರು.

ವೈದ್ಯಕೀಯ ಚಿಕಿತ್ಸೆ ನೀಡುವಾಗ ನಿರ್ಲಕ್ಷದಿಂದ ತೊಂದರೆಗೊಳಗಾದವ​ರಿಂದ ಬಂದ ದೂರುಗಳನ್ನು ವಿಳಂಬವಿಲ್ಲದೇಇತ್ಯರ್ಥ ಪಡಿಸಬೇಕೆಂದು ತಿಳಿಸಿದರು.​ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಕುಟುಂಬ​ ಕಲ್ಯಾಣಾಧಿಕಾರಿ ಡಾ. ರಾಮರಾವ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿ ಕಾರಿ ಪ್ರಶಾಂತ್ ಭಟ್, ಜಿಲ್ಲಾ ಸರ್ಜನ್​ ಮಧುಸೂದನ್ ನಾಯಕ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ನಣ್ಯ ಶೇರಿಗಾರ್, ಮತ್ತಿತರ ವೈದ್ಯಾಧಿಕಾರಿಗಳು​ ಉಪಸ್ಥಿತರಿದ್ದರು.

​​

 
 
 
 
 
 
 
 
 
 
 

Leave a Reply