ನಟ ದರ್ಶನ್ ಮೇಲೆ ಚಪ್ಪಲಿ ಎಸೆತ!

ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಮೇಲೆ ಚಪ್ಪಲಿ ಎಸೆದಿರುವ ಘಟನೆ ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ.

ನಟ ದರ್ಶನ್ ಹಾಗೂ ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾದ ಎರಡನೇ ಹಾಡು ‘ಬೊಂಬೆ ಬೊಂಬೆ’ಯನ್ನು ಹೊಸಪೇಟೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ವೇಳೆ ದರ್ಶನ್ ಅಭಿಮಾನಿಗಳು ಹಾಗೂ ಪುನೀತ್ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ಶುರುವಾಗಿದೆ.

ಅಪ್ಪು ಕಟೌಟ್ಸ್ ಹಿಡಿದ ಅಭಿಮಾನಿಗಳು ವೇದಿಕೆ ಏರಿದ್ದರು. ಈ ವೇಳೆ ಹೊಸಪೇಟೆಯಲ್ಲಿ ಅಪ್ಪು ಪುತ್ಥಳಿಗೆ ದರ್ಶನ್ ಮಾಲಾರ್ಪಣೆ ಮಾಡಿದ್ರು. ಬಳಿಕ ಇದು ತಣ್ಣಗಾಯಿತು. ವೇದಿಕೆಯಲ್ಲಿ ಹಾಡಿನ ಕುರಿತು ನಟಿ ರಚಿತಾ ರಾಮ್ ಮಾತನಾಡುತ್ತಿದ್ದಾಗ ಕಿಡಿಗೇಡಿಯೊಬ್ಬ ದರ್ಶನ್ ಮೇಲೆ ಚಪ್ಪಲಿ ಎಸೆದಿದ್ದಾನೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನು ತಮ್ಮ ನೆಚ್ಚಿನ ನಟನ ಮೇಲೆ ಚಪ್ಪಲಿ ಎಸೆದಿರುವ ಘಟನೆ ಬಗ್ಗೆ ದರ್ಶನ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆಯನ್ನು ಇಲ್ಲಿಗೆ ಬಿಡುವುದಿಲ್ಲ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ದರ್ಶನ್ ಅಭಿಮಾನಿ ತಮ್ಮ ಅಧಿಕೃತ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದು, ಬೇಸರ ತೋಡಿಕೊಂಡಿದ್ದಾರೆ. “ಹೊಸಪೇಟೆಯಲ್ಲಿ ನಡೆದಿರುವ ಘಟನೆ ತುಂಬಾ ನೋವುಂಟು ಮಾಡಿದೆ. ದರ್ಶನ್ ಮೇಲೆ ಮಾಡಿರುವ ಪಿತೂರಿ ಖಂಡನೀಯ. ನಿಮ್ಮ ಸಹಸ್ರ ಅಭಿಮಾನಿಗಳಲ್ಲಿ ಒಬ್ಬನಾಗಿ ಸಾಯೋವರೆಗೂ ನಿಮ್ಮ ಮೇಲಿನ ಅಭಿಮಾನ ಕಿಂಚಿತ್ತೂ ಕಡಿಮೆಯಾಗುವುದಿಲ್ಲ. ಇದಕ್ಕೆ ಕಾರಣರಾದವರಿಗೆ ಒಳ್ಳೆಯದಾಗಲಿ. ಕೆಟ್ಟದು ಬಯಸಿದವರಿಗೂ ಒಳ್ಳೆದು ಮಾಡಲಿ ಎಂದು ಡಿಬಾಸ್ ಹೇಳಿಕೊಟ್ಟಿದ್ದಾರೆ. ಕರ್ಮ ಎನ್ನುವುದು ಯಾರನ್ನೂ ಬಿಟ್ಟಿರಲ್ಲ. ಅದು ತಿರುಗಿಯೇ ತಿರುಗುತ್ತೆ. ನಿಮ್ಮ ಅಭಿಮಾನಿಗಳ ಮುಂದೆ ಈ ಘಟನೆಗಳು ಸಾಸಿವೆ ಕಾಳಿಗೆ ಸಮ” ಎಂದು ಬರೆದುಕೊಂಡಿದ್ದಾರೆ.

 
 
 
 
 
 
 
 
 
 
 

Leave a Reply