ಉಡುಪಿಗೂ ಡ್ರಗ್ಸ್ ಮಾಫಿಯಾ ನಂಟು  

ಬೆಂಗಳೂರು: ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ಡ್ರಗ್ಸ್ ಮಾಫಿಯಾದ ಜಾಡು ಇದೀಗ ಉಡುಪಿಯಲ್ಲಿಯು ಪತ್ತೆಯಾಗಿದೆ. ಡಾರ್ಕ್‌ನೆಟ್ ಮೂಲಕ ಡ್ರಗ್ಸ್ ಖರೀದಿಸಿ ತಂದು ಉಡುಪಿ ಹಾಗೂ ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಎನ್‌ಸಿಬಿ ಅಧಿಕಾರಿಗಳು ಇದೀಗ ಬಂಧಿಸಿದ್ದಾರೆ.

ಕೇರಳದ ಕೆ. ಪ್ರಮೋದ್, ಫಾಹಿಮ್ ಮತ್ತು ಕರ್ನಾಟಕದ ಎ. ಹಶೀರ್ ಹಾಗೂ ಎಸ್‌.ಎಸ್‌. ಶೆಟ್ಟಿ ಬಂಧಿತ ಆರೋಪಿಗಳು. ಇನ್ನು ಬಂಧಿತರಿಂದ ಅವರು ಸಾಗಿಸುತ್ತಿದ್ದ 750 ಎಂಡಿಎಂಎ ಮಾತ್ರೆ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ಜುಲೈನಲ್ಲಿ ಕಾರ್ಯಾಚರಣೆ ನಡೆಸಿದ ಎನ್‌ಸಿಬಿ ಅಧಿಕಾರಿಗಳು ಅಂಚೆ ಕಚೇರಿಗಳಲ್ಲಿ ಪಾರ್ಸೆಲ್ ಆಗುತ್ತಿದ್ದ ಡ್ರಗ್ಸ್ ಜಪ್ತಿ ಮಾಡಿದ್ದರು. ಮೊದಲಿಗೆ ಡ್ರಗ್ಸ್ ಯಾರು ತರಿಸಿದ್ದರು ಎಂಬುದು ತಿಳಿದು ಬಂದಿರಲಿಲ್ಲ.ನಂತರ ಹೆಚ್ಚಿನ ತನಿಖೆ ಕೈಗೊಂಡಾಗ ಈ ನಾಲ್ವರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಸದ್ಯ ಎರಡು ವರ್ಷಗಳಿಂದ ಈ ಗ್ಯಾಂಗ್ ಡ್ರಗ್ಸ್ ಮಾರಾಟ ಮಾಡುತ್ತಿತ್ತು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಮಣಿಪಾಲದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಚೆನೈ ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು‌ ಎನ್ನಲಾಗಿದೆ. ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದೂ ಅಧಿಕಾರಿ ತಿಳಿಸಿದ್ದಾರೆ.

Leave a Reply