Janardhan Kodavoor/ Team KaravaliXpress
26 C
Udupi
Monday, May 17, 2021

ಪೊಲೀಸ್ ಇಲಾಖೆ ಸೇರಲು ಪೋಲಿಸ್ ಠಾಣೆ ಸೇರಿದ ನಕಲಿ ಅಭ್ಯರ್ಥಿಗಳು

 ಬೆಂಗಳೂರು : ಕೆ.ಎಸ್.ಆರ್.ಪಿ ನೇಮಕಾತಿ ದೈಹಿಕ ಪರೀಕ್ಷೆ ಗೆ ಮಧ್ಯವರ್ತಿಗಳ ಮೂಲಕ ನಕಲಿ ಅಭ್ಯರ್ಥಿಗಳು ಹಾಜರಾಗಿದ್ದು, ನಿಜವಾದ ಪೊಲೀಸರು ಆರು ಜನ ನಕಲಿ ಪೊಲೀಸರನ್ನು ಬಂಧಿಸಿದ್ದಾರೆ. ವೈದ್ಯಕೀಯ ,ಅಂಕಪಟ್ಟಿ ದಾಖಲೆ ಪರಿಶೀಲನೆ ವೇಳೆ ಮೂವರು ಆರೋಪಿಗಳು ಸಿಕ್ಕಿಬಿದಿದ್ದಾರೆ.ಮಡಿವಾಳದ ಪರಪ್ಪನ ಅಗ್ರಹಾರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಜನವರಿಯಲ್ಲಿ ನಡೆದಿದ್ದ KSRP ನೇಮಕಾತಿ ದೈಹಿಕ ಪರೀಕ್ಷೆ ಗೆ 5 ಲಕ್ಷಕ್ಕೆ ಡೀಲ್ ಆಗಿದ್ದು, ಮೆಡಿಕಲ್ ಮತ್ತು ಅಂಕಪಟ್ಟಿ ದಾಖಲೆಗಳ ಪರಿಶೀಲನೆ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. 

ದೈಹಿಕ ಪರೀಕ್ಷೆ ವೇಳೆ ಅಭ್ಯರ್ಥಿಗಳ ವಿಡಿಯೋ ಗ್ರಾಫಿ ಇಲಾಖೆ ಮಾಡಿತ್ತು.ಜಗದೀಶ್ ದೊಡ್ಡಗೌಡರ್ ಪರವಾಗಿ ದೈಹಿಕ ಪರೀಕ್ಷೆಗೆ ಹಾಜರಾಗಿದ್ದ ಪ್ರಕಾಶ್ ಆಡಿನ್, ಮಲ್ಲಯ್ಯ ಪೂಜಾರಿ ಪರವಾಗಿ ಸೈಯಾದ್ ಚಿಮ್ಮಡ್ ದೈಹಿಕ ಪರೀಕ್ಷೆಗೆ ಹಾಜರು, ನಾಗಪ್ಪ ಪರವಾಗಿ ದೈಹಿಕ ಪರೀಕ್ಷೆಗೆ ಹಾಜರಾಗಿದ್ದ ಮಲ್ಲಿಕಾರ್ಜುನ ಎಂದು ತಿಳಿದು ಬಂದಿದೆ. ಈ ಆಧಾರದ ಮೇಲೆ ಅಧಿಕಾರಿಗಳಿಂದ ಪರಪ್ಪನ ಅಗ್ರಹಾರ, ಮಡಿವಾಳ ಪೊಲೀಸ್ ಠಾಣೆಯಲ್ಲಿ ಆರು ಮಂದಿಯ ಬಂಧನವಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...

ಹೋಪ್ ಇಂಡಿಯಾ ಫೌಂಡೇಶನ್​ ವತಿಯಿಂದ ​ಕೊರೋನಾ ಮುಕ್ತ ಉಡುಪಿ ನಿರ್ಮಾಣ​ ಪಣ ​  ​​

ಉಡುಪಿ ಬೋರ್ಡ್ ಹೈಸ್ಕೂ​ನಲ್ಲಿ  ಆಶ್ರಯ ಪಡೆದಿರುವ ಭಿಕ್ಷುಕರು, ನಿರ್ಗತಿಕರು ಹಾಗೂ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸಂಶಯವಿದ್ದು ಅವರಿಂದ ಉಳಿದ ಸಾರ್ವಜನಿಕರಿಗೆ ಹರಡುವುದನ್ನು ತಪ್ಪಿಸಿ ಕೊರೋನಾ...
error: Content is protected !!