ಉಡುಪಿ : ನಡುರಸ್ತೆಯಲ್ಲಿ ತಂಡಗಳ ನಡುವೆ ಗ್ಯಾಂಗ್ ವಾರ್!

ಉಡುಪಿ : ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ.

ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಜೂನ್ 1 ರ ವರೆಗೆ‌ ನ್ಯಾಯಂಗ ಬಂಧನ ವಿಧಿಸಿದ್ದಾರೆ. ಉಡುಪಿ ನಗರ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

 
 
 
 
 
 
 
 
 
 
 

Leave a Reply