ಗಾಣಿಗ ಕೊಲೆ ಪ್ರಕರಣದ ಆರೋಪಿ‌ ಬಾಲಚಂದ್ರ ಭಟ್ ಜಾಮೀನು‌ ಅರ್ಜಿ ತಿರಸ್ಕಾರ

ಕುಂದಾಪುರ: ಉಡುಪಿ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪೈಕಿ ತನ್ನ ವಕೀಲರ ಮೂಲಕ ಸೆಶನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.

ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಎಂ. ಜೋಷಿ ಆದೇಶಿಸಿದ್ದಾರೆ.ಕೊಲೆ ಸಂಚು ರೂಪಿಸಿದ ಆರೋಪದಡಿಯಲ್ಲಿ ಬಾಲಚಂದ್ರ ಭಟ್ ಬಂಧನವಾಗಿತ್ತು. ಈತ ತನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದ. ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಆರೋಪಿಗೆ ಜಾಮೀನು ನೀಡಿದಲ್ಲಿ ಸಾಕ್ಷ್ಯ ನಾಶ ಸಂಭವವಿದೆ. 

ಅಷ್ಟೇ ಅಲ್ಲದೆ ಆರೋಪಿಗೆ ಮತ್ತು ಮೃತ ವ್ಯಕ್ತಿಗೆ ವಿಚಾರವೊಂದರಲ್ಲಿ‌ ಮನಸ್ತಾಪ ಇರುವುದು ಪ್ರಾಥಮಿಕ ತನಿಖಾ ಹಂತದಲ್ಲಿ ತಿಳಿದುಬಂದಿದೆ. ತನಿಖೆ ನಡೆಯುತ್ತಿರುವ ಕಾರಣ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಶನ್‌ ಪರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್‌ಚಂದ್ರ ಶೆಟ್ಟಿ ನ್ಯಾಯಾಲಯದಲ್ಲಿ ವಾದಿಸಿದ್ದರು.

 

 

 

 
 
 
 
 
 
 
 
 
 
 

Leave a Reply