ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರುಗಳಿಗೆ ವೈ ಕೆಟಗರಿ ಭದ್ರತೆ

: ಹಿಜಾಬ್ ಕುರಿತು ಮಹತ್ವದ ತೀರ್ಪು ಪ್ರಕಟಿಸಿದ್ದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಹಾಗಾಗಿ ಅವರಿಗೆ ವೈ ಕೆಟಗರಿಯ ಭದ್ರತೆ ನೀಡುವ ತೀರ್ಮಾನವನ್ನು ರಾಜ್ಯ ಸರ್ಕಾರ ಮಾಡಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆ. ಎಂ ಖಾಜಿ ಅವರಿಗೆ ಕೊಲೆ ಬೆದರಿಕೆಯೊಡ್ಡಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಿಗೆ ರಾಜ್ಯ ಸರ್ಕಾರ ವೈ ಶ್ರೇಣಿ ಭದ್ರತೆ ಒದಗಿಸಿದೆ.

ತಮಿಳುನಾಡಿನ ಮಧುರೈ ಮೂಲದ ವ್ಯಕ್ತಿ ಯೊಬ್ಬರು ಕೊಲೆ ಬೆದರಿಕೆ ಹಾಕಿದ್ದು, ವಕೀಲರಾದ ಸುಧಾ ಕಟ್ವಾ ದೂರು ನೀಡಿದ್ದಾರೆ.

ಈ ದೂರನ್ನು ಆಧರಿಸಿ ಬೆಂಗಳೂರಿನ ವಿಧಾನಸೌಧ ಠಾಣೆ ಪೊಲೀಸರು ಶನಿವಾರ ಎಫ್.ಐ.ಆರ್ ದಾಖಲಿಸಿದ್ದರು. ಸಿಜೆ ಸೇರಿದಂತೆ ಮೂವರು ನ್ಯಾಯಮೂರ್ತಿಗಳಿಗೆ ವೈ ಭದ್ರತೆ ಒದಗಿಸಲಾಗಿದೆ.

ಹಿಜಾಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತು ರಾಜ್ ಅವಸ್ಥಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. ರೆಹಮತ್ತುಲ್ಲಾ ಬಂಧಿತ ಆರೋಪಿ.

ಈತ ತೌಹಿಫ್ ಜಮಾತ್ ಸಂಘಟನೆ ಸದಸ್ಯ. ಮಧುರೈ ಪೊಲೀಸರು ಶನಿವಾರ ರಾತ್ರಿ ಆರೋಪಿ ಯನ್ನು ತಿರುನಲ್ವೇಲಿಯಲ್ಲಿ ಬಂಧಿಸಿದ್ದರು.

ಆರೋಪಿಗೆ ಮಾ. 31ರ ವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆತನನ್ನು ತಿರುಪತ್ತೂರ್ ಜೈಲಿನಲ್ಲಿರಿಸಲಾಗಿದೆ.

ಹಿಜಾಬ್ ತೀರ್ಪು ಪ್ರಕಟಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿತ್ತು.

ತೌಹೀದ್ ಜಮಾತ್ ಸಂಘಟನೆ ಬೆದರಿಕೆ ಹಾಕಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಂಘಟನೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಮಧುರೈ ಪೊಲೀಸರೂ ಪ್ರಕರಣ ದಾಖಲಿಸಿ ಕೊಂಡಿದ್ದರು.

ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ ಸಂಬಂಧ ತನಿಖೆ ನಡೆಸುವಂತೆ ಒತ್ತಾಯಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದರು

 
 
 
 
 
 
 
 
 
 
 

Leave a Reply