ಹಿರಿಯಡ್ಕ: ಸಜೀವ ಮದ್ದುಗುಂಡುಗಳ ಸಹಿತ ಅಕ್ರಮ ವಸ್ತುಗಳು ಸ್ವಾಧೀನ

ಉಡುಪಿ ಜಿಲ್ಲೆಯ ಹಿರಿಯಡ್ಕ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಸಜೀವ ಮದ್ದು ಗುಂಡು ಸಹಿತ ಅಕ್ರಮ ದಾಸ್ತಾನುಗಳನ್ನು ವಶಕ್ಕೆ ಪಡೆದಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಬಿ.ಇ ಅವರಿಗೆ ದೊರಕಿದ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆದಿದ್ದು, ದಿವಾಕರ ಎಂಬಾತನ ಮನೆಗೆ ದಾಳಿ ನಡೆಸಿದ ಸಂದರ್ಭ ಕಪ್ಪು ಬಣ್ಣದ ಬಟ್ಟೆ ಪೌಚ್ , ಸಜೀವ ಮದ್ದು ಗುಂಡುಗಳು, ಮಸಿ ಕೋವಿಗೆ ಬಳಸುವ ಮದ್ದು ಗುಂಡುಗಳು, ಪ್ಲಾಸ್ಟಿಕ್ ಪೌಚ್‌ನಲ್ಲಿ ಇರಿಸಲಾದ ಡೆಟೋನೇಟರ್ ಗಳು,

ಪ್ಲಾಸ್ಟಿಕ್ ಪೌಚ್‌ನಲ್ಲಿ ಇರಿಸಲಾದ ಯಾವುದೋ ಪ್ರಾಣಿಯ ಹಲ್ಲಿನ ಆಕಾರದ ಸ್ವತ್ತುಗಳು, ಯಾವುದೋ ಪ್ರಾಣಿಯ ಉಗುರಿನ ಆಕಾರದ ಸ್ವತ್ತುಗಳು, ಪಾಸ್ಟಿಕ್ ಪೌಚ್‌ನಲ್ಲಿ ಇರಿಸಿದ ಪಿಸ್ತೂಲ್‌ಗೆ ಬಳಸುವ 7.65 ಎಂಎಂ ಸಜೀವ ಗುಂಡುಗಳು, 15 ಇಂಚು ಉದ್ದದ ಹಳೆಯ ಕೋವಿಯ ಮರದ ಬಟ್,

15 ಇಂಚು ಉದ್ದದ ಹಳೆಯ ಕೋವಿಯ ಮರದ ಬಟ್, ಹಾಕಿ ಸ್ಟಿಕ್, ಸ್ಟೀಲ್ ಚಾಕುಗಳು, ಸ್ಟೀಲಿನ ದೊಡ್ಡ ಗಾತ್ರದ ಮಚ್ಚು, ನೀಲಿ ಬಣ್ಣದ ಪ್ಲಾಸ್ಟಿಕ್ ಚೀಲದಲ್ಲಿದ್ದ ಒಣಗಿಸಿದ ಗಾಂಜಾ, ಸಣ್ಣ ಖಾಲಿ ಪ್ಲಾಸ್ಟಿಕ್ ಪೌಚ್‌ಗಳು, ಪ್ಲಾಸ್ಟಿಕ್ ಕ್ಯಾನ್ ನಲ್ಲಿ ತುಂಬಿ ಸಿಟ್ಟಿರುವ ಸ್ಪಿರೀಟ್ ಪತ್ತೆಯಾಗಿದ್ದು, ಇವುಗಳನ್ನು ಸ್ವಾಧೀನಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply