ಇಂದ್ರಾಳಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಇಂದ್ರಾಳಿಯ ರೈಲ್ವೆ ನಿಲ್ದಾಣ ಬಳಿ ನಡೆದಿದೆ.

ಇಂದ್ರಾಳಿ ರೈಲ್ವೆ ಸಿಬ್ಬಂದಿ ನಿತ್ಯಾನಂದ ಶೆಟ್ಟಿಗಾರ್ (47) ಆತ್ಮಹತ್ಯೆ ಮಾಡಿಕೊಂಡವರು. 

ರೈಲ್ವೇ ಸಿಬ್ಬಂದಿಯಾಗಿರುವ ಇವರು ಕೆಲಸ ಮಾಡುತ್ತಿದ್ದಂತೆ ಹೊರ ಬಂದು ರೈಲ್ವೆ ನಿಲ್ದಾಣದ ಬಳಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. 

 
 
 
 
 
 
 
 
 
 
 

Leave a Reply