ಜಮೀರ್ ಮನೆಯಲ್ಲಿ 24 ಜೀವಂತ ಮದ್ದು ಗುಂಡು ಪತ್ತೆ

ಬೆಂಗಳೂರು: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಜಮೀರ್ ಪ್ಲ್ಯಾಟ್‌ನಲ್ಲಿ 24 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಜಮೀರ್ ಪಿಸ್ತೂಲ್ ಪರವಾನಗಿ ಹೊಂದಿದ್ದು ಇದರೊಂದಿಗೆ ಒಂದು Empty bullet case ಪತ್ತೆಯಾಗಿದ್ದು, ಗುಂಡು ಹಾರಿಸಿದರೆ ಮಾತ್ರ ಈ Empty bullet case ಉಳಿಯುತ್ತದೆ. ಹೀಗಾಗಿ ಇದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಬೆಂಗಳೂರಿನ 5 ಪ್ರದೇಶಗಳಲ್ಲಿ 40ಕ್ಕೂ ಅಧಿಕ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಸಂಜೆಯ ತನಕ ಪರಿಶೀಲನೆ ಕಾರ್ಯ ನಡೆಯಲಿದೆ ಎಂದು ಅಂದಾಜಿಸಲಾಗಿದೆ. 2021ರ ಆಗಸ್ಟ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ದಾಳಿ ಮಾಡಿದ್ದರು. ಇದರ ವರದಿ ಆಧಾರದ ಮೇಲೆ ಎಸಿಬಿ ಅಕ್ರಮ ಆಸ್ತಿಗಳಿಕೆ ಪ್ರಕರಣ ದಾಖಲು ಮಾಡಿಕೊಂಡಿತ್ತು. ಈ ಪ್ರಕರಣದ ಆಧಾರದ ಮೇಲೆಯೇ ದಾಳಿ ಮಾಡಲಾಗಿದೆ.

Leave a Reply