ಕುಖ್ಯಾತ ರೌಡಿ ಆಕಾಶಭವನ ಶರಣ್ ಸಹಿತ ಐವರ ಬಂಧನ

ಮಂಗಳೂರು: ತನ್ನ ಸಹಚರರ ಮೂಲಕ ವಿರೋಧಿ ತಂಡದ ವ್ಯಕ್ತಿಯನ್ನು ಕೊಲೆ ಮಾಡಲು ಸಂಚು ರೂಪಿಸುತ್ತಿದ್ದ ಕುಖ್ಯಾತ ರೌಡಿ ಆಕಾಶಭವನ ಶರಣ್ ಹಾಗೂ ಇತರ ನಾಲ್ವರು ಆರೋಪಿಗಳನ್ನು ಮಂಗಳೂರು ನಗರದ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರೌಡಿ ಶರಣ್ ಆಕಾಶಭವನ ಅಲಿಯಾಸ್‌ ರೋಹಿದಾಸ್ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ, ಪ್ರಾಯ(22), ಪ್ರಸಾದ್ (39), ಚೇತನ್ ಕೊಟ್ಟಾರಿ(35) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರಿಡ್ಜ್ ಬಳಿಯಲ್ಲಿ ಡಿ.8 ರಂದು ರಾತ್ರಿ ಸುಮಾರು 11-30 ರ ಸುಮಾರಿಗೆ ಹಳೆಯಂಗಡಿ ನಿವಾಸಿಯೊಬ್ಬರು ದ್ವಿ ಚಕ್ರ ವಾಹನದಲ್ಲಿ ತೆರಳುತ್ತಿದ್ದರು.

ಈ ವೇಳೆ ಅಪರಿಚಿತ ವ್ಯಕ್ತಿಗಳಿದ್ದ ಕಾರು ಅವರನ್ನು ಹಿಂಬಾಲಿಸಿ ತಡೆದು ಚಾಕು ತೋರಿಸಿ ಬೆದರಿಸಿ ಅವರ ಬಳಿಯಿದ್ದ ಮೊಬೈಲ್ ಫೋನ್, 3000 ರೂಪಾಯಿ ನಗದು ಹಾಗೂ ಟಿವಿಎಸ್ ದ್ವಿಚಕ್ರವನ್ನು ಸುಲಿಗೆ ಮಾಡಿದ್ದರು.

 
 
 
 
 
 
 
 
 
 
 

Leave a Reply