Janardhan Kodavoor/ Team KaravaliXpress
29.6 C
Udupi
Thursday, January 20, 2022
Sathyanatha Stores Brahmavara

ಕುಂದಾಪುರ :ಭಾವನಾತ್ಮಕ ಡೆತ್ ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣು

ಕುಂದಾಪುರ: ಮೊಬೈಲ್ ಯಾಪ್ ನಲ್ಲಿ‌ ಮಾಡಿಕೊಂಡ ಸಾಲ ತೀರಿಸಲಾಗದೆ ಡೆತ್ ನೋಟ್ ಬರೆದಿಟ್ಟು ಎಮ್ಎನ್ಸಿ ಕಂಪೆನಿ ಉದ್ಯೋಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ಇಲ್ಲಿನ ಹೆಮ್ಮಾಡಿಯ ಹರೆಗೋಡುವಿನಲ್ಲಿ ನಡೆದಿದೆ. ಹೆಮ್ಮಾಡಿಯ ಹರೆಗೋಡು ಕೊಳಹಿತ್ಲು ನಿವಾಸಿ ಸಂಜೀವ ದೇವಾಡಿಗ ಹಾಗೂ ಕನಕ ಎಂಬವರ ಪುತ್ರ ವಿಘ್ನೇಶ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಬುಧವಾರ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಬೇಗನೇ ಮಲಗಿದ್ದ ವಿಘ್ನೇಶ್ ನಸುಕಿನ ಜಾವ ಐದು ಗಂಟೆಯ ಸುಮಾರಿಗೆ ಮನೆ ಎದುರಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಘ್ನೇಷ್ ತಾಯಿ ಬೆಳಿಗ್ಗೆ ಎದ್ದು ನೋಡುವಾಗ ಮನೆಯ ಬಾಗಿಲು ತೆರೆದಿತ್ತು. ಅನುಮಾನಗೊಂಡು ಹೊರಗಡೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಸಂಜೀವ ಹಾಗೂ ಕನಕ ದಂಪತಿಗಳ ನಾಲ್ವರು ಮಕ್ಕಳಲ್ಲಿ ಎರಡನೇ ಪುತ್ರನಾದ ವಿಘ್ನೇಶ್ ಬೆಂಗಳೂರಿನ ಎಮ್ ಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೊದಲ‌ ಲಾಕ್ ಡೌನ್ ಸಮಯದಲ್ಲಿ ಊರಿಗೆ ಮರಳಿದ್ದರು. ಬಳಿಕ ವರ್ಕ್ ಫ್ರಮ್ ಹೋಮ್ ನಡಿಯಲ್ಲಿ ಮನೆಯಲ್ಲೇ ಕೆಲಸ ಮಾಡುತ್ತಿದ್ದು, ಅದರ ಜೊತೆಜೊತೆಗೆ ಕಳೆದ ಒಂದು ವರ್ಷಗಳ ಹಿಂದೆ ಸ್ನೇಹಿತರೊಡಗೂಡಿ ಬ್ರಹ್ಮಾವರ ಸಮೀಪ ಚಪ್ಪಲಿ ಹೋಲ್ ಸೆಲ್ ಶೋರೂಂ ಒಂದನ್ನು ಆರಂಭಿಸಿದ್ದರು

ಈ ಸಮಯದಲ್ಲಿ ಉದ್ಯಮಕ್ಕೆ ಬಂಡವಾಳ ಹಾಕುವ ಉದ್ದೇಶದಿಂದ ಮೊಬೈಲ್ ಯಾಪ್‌ ಮೂಲಕ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ಲಾಕ್ ಡೌನ್ ಕಾರಣದಿಂದಾಗಿ ಆರಂಭಿಸಿದ ವ್ಯವಹಾರ ಕೈಹಿಡಿಯದ ಹಿನ್ನೆಲೆ ವಿಘ್ನೇಶ್ ಗೆ ಪಡೆದುಕೊಂಡ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮೊಬೈಲ್ ಯಾಪ್ ಮೂಲಕ ಸಾಲ ಕೊಟ್ಟವರು ಕಿರುಕುಳ ತಾಳಲಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮೊದಲೇ ವಿಘ್ನೆಶ್ ಡೆತ್ ನೋಟ್ ಬರೆದಿದ್ದಾರೆ. “ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡಿರುವ ಸಾಲ. ಮೊಬೈಲ್ ಯಾಪ್‌ನಲ್ಲಿ ಮಾಡಿಕೊಂಡ ಸಾಲ ನನಗೆ ತೀರಿಸಲು ಆಗುತ್ತಿಲ್ಲ. ಆದ್ದರಿಂದ ನಾನು ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ. ನನ್ನ‌ ಸಾಲ ಇದೆ ಕಟ್ಟಿ ಎಂದು ಯಾರಾದರೂ ಕರೆ ಮಾಡಿದರೆ ಅವನು‌ ನಮಗೆ ಗೊತ್ತಿಲ್ಲ ಅಥವಾ ಸತ್ತು ಹೋದ ಎಂದು ಹೇಳಿ ಬಿಡಿ. ಎಲ್ಲರಿಗೂ ಮೋಸ ಮಾಡಿ ಹೋಗುತ್ತಿದ್ದೇನೆ. ಕ್ಷಮಿಸಿ ಬಿಡಿ.

ಸದ್ಯ ಕುಂದಾಪುರ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹದ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!