ಕುಂದಾಪುರ : ರ್‍ಯಾಗಿಂಗ್ ಮಾಡುತ್ತಿದ್ದ ವಿದ್ಯಾರ್ಥಿಗಳು ಅಂದರ್

ಈಸಿಆರ್ ಇನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡಿ ಕಾಲೇಜಿಗೆ ಸಂಬಂದಪಟ್ಟ ವಕ್ವಾಡಿಯಲ್ಲಿರುವ ಹಾಸ್ಟೆಲ್‌ನಲ್ಲಿ ರ್‍ಯಾಗಿಂಗ್ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಪೋಲಿಸರು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.

ಇಬ್ಬರು ಕಿರಿಯ ವಿದ್ಯಾರ್ಥಿಗಳಿಗೆ ರ್‍ಯಾಗಿಂಗ್ ಮಾಡಿ ಹಲ್ಲೆ ನಡೆಸಿದ ಹಿರಿಯ ವಿದ್ಯಾರ್ಥಿಗಳಾದ ದಿಲ್ಶಾದ್ ಮತ್ತು ಶಿಂಟೊ ಬಂಧಿಸಲಾಗಿದೆ. ಆರೋಪಿಗಳು ಓರ್ವ ವಿದ್ಯಾರ್ಥಿ ಮೇಲೆ ಗಂಭೀರ ಹಲ್ಲೆ ನಡೆಸಿದ್ದು, ಗಾಯಗೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ದುರ್ಗಾದಾಸ್ ಗಂಭೀರ ಗಾಯಗೊಂಡ ವಿದ್ಯಾರ್ಥಿ. ಪೋಲಿಸರು ಹಲ್ಲೆ ನಡೆಸಿದ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply