ಮಂಗಳೂರಿನ ಖಾಸಗಿ ಬಸ್ಸಿನಲ್ಲಿ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ 8ಜನರ ಬಂಧನ

ಮಂಗಳೂರು: ಗುರುವಾರ ಏಪ್ರಿಲ್ 1 ರ ರಾತ್ರಿ ನಗರದಿಂದ ಬೆಂಗಳೂರಿಗೆ ಖಾಸಗಿ ಬಸ್ ಮೂಲಕ ಪ್ರಯಾಣಿಸುತ್ತಿದ್ದ ಯುವತಿಯೊಂದಿಗಿದ್ದ ಇದ್ದ ಯುವಕನ ಮೇಲೆ ಹಿಂದೂ ಸಂಘಟನೆಯ ಸದಸ್ಯರು ಹಲ್ಲೆ ನಡೆಸಿದ ಕೆಲವೇ ಗಂಟೆಗಳಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಕಮಿಷನರ್ ಎನ್.ಶಶಿ ಕುಮಾರ್, ಕಂಕನಾಡಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ನಲ್ಲಿ ಹುಡುಗಿಯೊಡನೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಒಂದು ಗುಂಪು ಹಲ್ಲೆ ನಡೆಸಿತ್ತು. ತೀಕ್ಷ್ಣ ಆಯುಧದಿಂದ ಗುಂಪು ದಾಳಿ ಮಾಡಿದ ಕಾರಣ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಪ್ರಗತಿಯಲ್ಲಿದೆ. ನಾವು ಎಂಟು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, 307 ಮತ್ತು ಐಪಿಸಿಯ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಕಳೆದ ಎರಡು ತಿಂಗಳಲ್ಲಿ ಇಂತಹ ಮೂರರಿಂದ ನಾಲ್ಕು ಘಟನೆಗಳು ವರದಿಯಾಗಿವೆ. ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ಕೆಲಸ ಹುಡುಕಲು ಹುಡುಗಿ ಬೆಂಗಳೂರಿಗೆ ತೆರಳುತ್ತಿದ್ದಳು. ಹುಡುಗಿಗೆ ಬೆಂಗಳೂರಿನ ಪರಿಚಯವಿಲ್ಲದ ಕಾರಣ, ಹುಡುಗನನ್ನು ಉದ್ಯೋಗ ಹುಡುಕಲು ತನ್ನೊಂದಿಗೆ ಬರಲು ಕೇಳಿಕೊಂಡಿದ್ದಳು. ಇಬ್ಬರೂ ನಗರದಲ್ಲಿ ತಮ್ಮ ಪದವಿ ಮುಗಿಸಿದ್ದಾರೆ. ಇಬ್ಬರೂ ಕೂಡ ಒಬ್ಬರಿಗೊಬ್ಬರು ಪರಿಚಯಸ್ಥರು ಎಂದು ಕಮಿಷನರ್ ಹೇಳಿದರು.

ಈ ರೀತಿಯ ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ಸಂಜೆ ಮತ್ತು ರಾತ್ರಿಯ ಸಮಯದಲ್ಲಿ ಬಸ್ ನಿಲ್ದಾಣ, ಕಡಲತೀರಗಳು ಮತ್ತು ಉದ್ಯಾನವನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.ಎಸಿಪಿ ರಂಜಿತ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply