ಮಣಿಪಾಲ: ಎಂಟನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೈದ ವಿದ್ಯಾರ್ಥಿನಿ

ಮಣಿಪಾಲ: ಇಲ್ಲಿನ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ತನ್ನ ಪ್ಲಾಟ್‌ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.ಹೆರ್ಗಾ ಗ್ರಾಮದ ಕೃತಿಕಾ ಎಂಬವರ ಮಗಳು ಪ್ರಜ್ಞಾ (13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪ್ರಜ್ಞಾ ಹೆರ್ಗಾ ಗ್ರಾಮದ ಸರಳೇಬೆಟ್ಟು ಹೈಪಾಯಿಂಟ್‌ ಹೈಟ್ಸ್‌ ಟೆರೇಸ್‌ನಿಂದ ನ.5 ರಂದು ಬೆಳಿಗ್ಗೆ 6.20ಕ್ಕೆ ಎಂಟನೇ ಮಹಡಿಯಿಂದ ಹಾರಿದ್ದಳು. ತಕ್ಷಣ ಮನೆಯವರು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ  ದಾಖಲಿಸಿದ್ದರು.

ಗಂಭೀರ ಗಾಯಗೊಂಡ ಪ್ರಜ್ಞಾ ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಸಂಜೆ 7:45 ಗಂಟೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಮಣಿಪಾಲ ಪೊಲೀಸರು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply