ಮೆಹಂದಿ ಕಾರ್ಯಕ್ರಮಕ್ಕೆ ಅನುಮತಿ ಇಲ್ಲ, ಆಯೋಜನೆ ಮಾಡಿದರೆ ಕ್ರಿಮಿನಲ್ ಮೊಕದ್ದಮೆ: ಉಡುಪಿ ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಲ್ಲಿ ಮೆಹಂದಿ ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ನೀಡಿಲ್ಲ. ಯಾರಾದರೂ ಅನುಮತಿಯಿಲ್ಲದೆ ಕಾರ್ಯಕ್ರಮ ಮಾಡಿದ್ದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು.

ಅದಕ್ಕೆ ಭಾಗವಹಿಸುವ ವಿಡಿಯೋ ಮತ್ತು ಫೋಟೋಗ್ರಾಫರ್ ಗಳು ಅದೇ ರೀತಿ ಯಾರೆಲ್ಲ ಕಾರ್ಯಕ್ರಮಕ್ಕೆ ಸಹಕರಿ ಸುತ್ತಾರೆ ಅವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಶನಿವಾರ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಸೋಂಕು ಹರಡುತ್ತಿದೆ. ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲಾಧಿಕಾರಿ ಜಿ.‌ ಜಗದೀಶ್ ರವರು ಗ್ರಾಮೀಣ ಪ್ರದೇಶಗಳಲ್ಲ ಸೋಂಕಿಗೆ ಒಳಗಾದವರ ಮನೆಗೆ ಅಧಿಕಾರಿಗಳು ಹಾಗೂ ಟಾಸ್ಕ್ ಫೋರ್ಸ್ ಸಿಬ್ಬಂದಿಗಳ ಜೊತೆಗೆ ಭೇಟಿ ನೀಡಿ ಧೈರ್ಯ ತುಂಬುತ್ತಿದ್ದಾರೆ.

 
 
 
 
 
 
 
 
 
 
 

Leave a Reply