ಮಂಗಳೂರು ವಿಮಾನ ನಿಲ್ದಾಣ: 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರು ವಶಕ್ಕೆ!!

ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಭಾರತದಿಂದ ದುಬೈಗೆ ಅಕ್ರಮವಾಗಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಭಟ್ಕಳದ ಅನಾಸ್ ಮತ್ತು ಅಮ್ಮರ್ ಶೂ ಮತ್ತು ಬ್ಯಾಗ ಅಡಿಯಲ್ಲಿ ವಜ್ರವನ್ನು ಅಡಗಿಸಿಟ್ಟುಕೊಂಡು ದುಬೈಗೆ ಸಾಗಾಟ ಮಾಡುತ್ತಿದ್ದ ವೇಳೆ ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದಲ್ಲಿ ತಪಾಸಣೆ ವೇಳೆ ಪತ್ತೆಯಾಗಿದ್ದು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಈ ವಜ್ರವನ್ನು ಮುಂಬೈಯಿಂದ ತಂದಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

 
 
 
 
 
 
 
 
 
 
 

Leave a Reply