ಮಂಗಳೂರು: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸುಳ್ಯದ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಬೆಂಗಳೂರು ಮೂಲದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸುಳ್ಯದ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಳ್ಯದ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಸೋನಿಯಾ ಎಂಬ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಈ ಕೃತ್ಯ ಎಸಗಿದ್ದಾರೆ.

ಸೋನಿಯಾ ಮೂಲತ: ಬೆಂಗಳೂರಿನ ರಾಮನಾಥಪುರ ಕಾರಮಂಗಲ ಸಮೀಪದ ಮಾರ್ಲ ಮಂಗಲ ಗ್ರಾಮದ ನಿವಾಸಿ. ಪುರುಷೋತ್ತಮ ಮತ್ತು ರೀನಾ ದಂಪತಿ ಪುತ್ರಿ.

ಸುಳ್ಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಸೋಮವಾರ ತರಗತಿಗೆ ಹಾಜರಾಗಿರಲಿಲ್ಲ. ಹಾಸ್ಟೆಲ್ ನಲ್ಲಿ ಇದ್ದರು. ಇತರ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಇರದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

 
 
 
 
 
 
 
 
 
 
 

Leave a Reply