ಉಜಿರೆ : ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಂದೆ!

ಅಪ್ಪ – ಮಗನ ನಡುವೆ ನಡೆದ ಗಲಾಟೆಯಲ್ಲಿ ಅಪ್ಪ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲುನಲ್ಲಿ ನಡೆದಿದೆ.

ಮೃತರನ್ನು ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದೆ.

ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ. ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಂದೆ ಈಗ ಜೈಲು ಪಾಲಾಗಿದ್ದಾರೆ.

 
 
 
 
 
 
 
 
 
 
 

Leave a Reply