ಪಾಗಲ್‌ ಪ್ರೇಮಿಯ ಹುಚ್ಚಾಟದಿಂದ ಇರಿತಕ್ಕೊಳಗಾದ ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ಉಡುಪಿ: ಯುವಕನಿಂದ ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಸಂತೆಕಟ್ಟೆ ಸಮೀಪದ ಕಕ್ಕುಂಜೆ ನಿವಾಸಿ ಸೌಮ್ಯ ಭಂಡಾರಿ ಮೃತ ಯುವತಿ.

ಉಡುಪಿಯ ಸಂತೆಕಟ್ಟೆ ಸಮೀಪ ಉದ್ಯೋಗಿಯಾಗಿರುವ ಯುವತಿ ಮತ್ತು ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ಸೌಮ್ಯಶ್ರೀಗೆ ವಾರದ ಹಿಂದೆ ನಿಶ್ಚಿತಾರ್ಥ ಆಗಿತ್ತು. ಇದರಿಂದ ಗೆಳೆಯ ಸಂದೇಶ ಕುಲಾಲ್ ಕುಪಿತಗೊಂಡಿದ್ದ.  ಬ್ಯಾಂಕಿನಿಂದ ಆಕೆ ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭ ಯುವಕ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಅಡ್ಡಗಟ್ಟಿ ನಿಂತಿದ್ದಾನೆ. ಯುವತಿಯ ಜೊತೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ

ಜಗಳ ಮುಂದುವರೆದು ಯುವಕ ಯುವತಿಗೆ ಚಾಕುವಿನಿಂದ ಇರಿದಿದ್ದಾನೆ. ದ್ವಿಚಕ್ರವಾಹನ ದಿಂದ ಯುವತಿ ಕೆಳಗೆ ಬಿದ್ದಿದ್ದಾಳೆ. ಪಾಗಲ್ ಪ್ರೇಮಿಯೂ ನಂತರ ಅದೇ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡಿದ್ದಾನೆ. ಸ್ಥಳೀಯರು ಘಟನೆಯನ್ನು ತಪ್ಪಿಸಲು ಯತ್ನಿಸಿದ್ದು ಅಷ್ಟರಲ್ಲೇ ಇಬ್ಬರೂ ಕುಸಿದು ಬಿದ್ದಿದ್ದಾರೆ.

ಗಂಭೀರ ಗಾಯಗೊಂಡ ಯುವತಿ ಹಾಗೂ ಯುವಕ ಸಂದೇಶ್‌ ಕುಲಾಲ್‌ ನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಯುವತಿ ಅತೀವ ರಕ್ತಸ್ರಾವದಿಂದ ಮೃತಪಟ್ಟಿದ್ದು ಯುವಕ ಸಂದೇಶ್‌ ಕುಲಾಲ್‌ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply