ವ್ಯಕ್ತಿ ನಾಪತ್ತೆ

ಉಡುಪಿ,: ಕಾಪು ನಿವಾಸಿ ಚಂದ್ರ (48) ಎಂಬ ವ್ಯಕ್ತಿಯು ಡಿಸೆಂಬರ್ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. 
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ ನಿಸ್ತಂತು ಘಟಕ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply