ಪರ್ಕಳ : ಬೈಕ್ ಅಪಘಾತ; ಯುವಕ ಮೃತ್ಯು!

ಪರ್ಕಳ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಾಜಕದ ಬಳಿ ಬೈಕ್ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಅ. 18 ರ ಮುಂಜಾನೆ ಸಂಭವಿಸಿದೆ. ಮೃತ ಯುವಕನನ್ನು ಹಿರಿಯಡ್ಕದ ನಿವಾಸಿ ಅಕ್ಷಯ ಭಟ್ (26) ಎಂದು ತಿಳಿದುಬಂದಿದೆ.

ಯವಕ ಅಡುಗೆ ವೃತ್ತಿ ಮಾಡಿಕೊಂಡಿದ್ದು, ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆ ಅಡುಗೆ ಕೆಲಸ ನಿರ್ವಹಿಸಲು ಮನೆಯಿಂದ ಹೋಗುವ ಸಂದರ್ಭ ಈ ದುರ್ಘಟನೆ ನಡೆದಿದೆ.

ಮಣಿಪಾಲ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ತೆರಳಿ ಕಾನೂನು ಪ್ರಕ್ರಿಯೆ ನಡೆಸಿ ಶವವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply