ಸೇನಾ ಸಿಬ್ಬಂದಿಗೆ ಥಳಿಸಿ, ಬೆನ್ನಿನಲ್ಲಿ PFI ಎಂದು ಬರೆದ ದುಷ್ಕರ್ಮಿಗಳು!

ಸೇನಾ ಸಿಬ್ಬಂದಿಯೊಬ್ಬರ ಕೈಗಳನ್ನು ಹಿಂದಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿ ಬಳಿಕ ಅವರ ಬೆನ್ನಿನಲ್ಲಿ PFI ಎಂದು ಕಿಡಿಗೇಡಿಗಳು ಬರೆದ ಘಟನೆಯೊಂದು ಕೇರಳದಲ್ಲಿ ಬೆಳಕಿಗೆ ಬಂದಿದೆ.
ಈ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಸೇನಾ ಸಿಬ್ಬಂದಿಯು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ.
ಹಲ್ಲೆಗೊಳಗಾದ ಸೇನಾ ಸಿಬ್ಬಂದಿಯನ್ನು ಶೈನ್ ಕುಮಾರ್ ಎಂದು ಗುರುತಿಸಲಾಗಿದೆ. ಇವರ ನಿವಾಸ ಕಡಕ್ಕಲ್ ಹತ್ತಿರದ ರಬ್ಬರ್ ತೋಟದಲ್ಲಿ 6 ಜನರಿದ್ದ ಗುಂಪು ಭಾನುವಾರ ರಾತ್ರಿ ಈ ಕೃತ್ಯ ಎಸಗಿದೆ. ಟೇಪ’ನಿಂದ ತನ್ನ ಎರಡೂ ಕೈಗಳನ್ನು ಹಿಂದಕ್ಕೆ ಕಟ್ಟಿ, ಥಳಿಸಿ ಬಳಿಕ ಬೆನ್ನಲ್ಲಿ ಹಸಿರು ಬಣ್ಣ ಪೈಂಟ್‍’ನಲ್ಲಿ PFI ಎಂದು ಬರೆದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಅವರು ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ನಿಷೇಧಿತ PFI ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಕೇರಳದ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ದಿನ ಈ ಘಟನೆ ವರದಿಯಾಗಿದೆ.
 
 
 
 
 
 
 
 
 
 
 

Leave a Reply