ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಗುಂಡಿಕ್ಕಿಕೊಂಡು ಆತ್ಮಹತ್ಯೆ.

ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಎಂದು ಗುರುತಿಸಲಾಗಿದೆ.

ರಾಜೇಶ್ ಆದಿಉಡುಪಿ ಶಾಲೆಯಲ್ಲಿ ಎಸೆಸೆಲ್ಸಿ ಉತ್ತರ ಪತ್ರಿಕೆಯ ಭದ್ರತಾ ಕೊಠಡಿ ನಿರ್ವಹಣೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪತ್ನಿ ಹಾಗು ಅವಳಿ ಮಕ್ಕಳನ್ನು ಅಗಲಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply