ಶಾಲಾ ವಿದ್ಯಾರ್ಥಿನಿ ಜತೆ ಸಬ್ ಇನ್ಸ್ ಪೆಕ್ಟರ್ ಪರಾರಿ

ಲಕ್ನೋ: ಉತ್ತರಪ್ರದೇಶದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೊಬ್ಬರು  ಶಾಲಾ ವಿದ್ಯಾರ್ಥಿನಿ ಜತೆ  ಪರಾರಿ ಯಾಗಿದ್ದಾರೆ. ಉತ್ತರಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಈ ಪ್ರಕರಣ ವರದಿಯಾಗಿದೆ.

ಲಖೀಂಪುರ ಜಿಲ್ಲೆಯ ಪಲಿಯಾ ಚೌಕಿ ಪೊಲೀಸ್ ಠಾಣೆಯಲ್ಲಿ ಪ್ರಭಾರ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜೋಗೇಂದ್ರ ಸಿಂಗ್ ಎಂಬ ಪೊಲೀಸ್ ಸಬ್ ಇನ್ಸ್ ಪೆಕ್ಟರ್  ವಿದ್ಯಾರ್ಥಿನಿ ಜತೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಅನುಮತಿ ಪಡೆಯದೆ ಜೋಗೇಂದ್ರ ಸಿಂಗ್ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

 
 
 
 
 
 
 
 
 
 
 

Leave a Reply