ಪೊಲೀಸ್ ಕಾನ್ಸ್‌ಟೇಬಲ್ ಹೆಂಡ್ತಿ ಜೊತೆ ಎಸ್‌ಪಿ ಅಕ್ರಮ ಸಂಬಂಧ!

ಕಲಬುರಗಿ ಐಎಸ್​​ಡಿ ವಿಭಾಗದ ಎಸ್​​ಪಿ ಆಗಿರುವ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ವಿರುದ್ಧ ಹೆಡ್‌ ಕಾನ್ಸ್‌ಟೇಬಲ್‌ ಕಂಟೆಪ್ಪ ಗಂಭೀರ ಆರೋಪ ಮಾಡಿದ್ದಾರೆ. ಆಂತರಿಕ ಭದ್ರತಾ ವಿಭಾಗದಲ್ಲಿ ಎಎಸ್​​ಐ ಆಗಿರುವ ನನ್ನ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ. ಕಲಬುರಗಿ ನಗರದ ಐವಾನ್ ಶಾಹೀ ಬಡವಾಣೆಯ ಪಿಡಬ್ಲುಡಿ ಕ್ವಾಟರ್ಸ್​​ನಲ್ಲಿ ಮಹಿಳಾ ಅಧಿಕಾರಿ ಹಾಗೂ ಐಪಿಎಸ್​​ ಅಧಿಕಾರಿ ಇಬ್ಬರು ಅನೈತಿಕ ಸಂಬಂಧದಲ್ಲಿ ತೊಡಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಕಾನ್ಸ್​​ಟೇಬಲ್​​ ಕಂಟೆಪ್ಪನಿಗೆ ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು ಎಂದು ಆರೋಪಿಸಿದ್ದಾರೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಗ್ಗೆ ಕಾನ್ಸ್​​ಟೇಬಲ್​​ ಕಂಟೆಪ್ಪ ವಿಡಿಯೋ ಕೂಡ ಮಾಡಿಕೊಂಡಿದ್ದಾರಂತೆ. ಆದರೆ ಈ ವೇಳೆ ಪತ್ನಿ ಹಾಗೂ ಐಪಿಎಸ್​ ಅಧಿಕಾರಿ ಇಬ್ಬರು ಅವರಿಗೆ ಹೊಡೆದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಂತೆ. ಕಳೆದ ಹಲವು ತಿಂಗಳಿನಿಂದ ಇಬ್ಬರ ನಡುವೆ ಅನೈತಿಕ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಮಹಿಳಾ ಎಎಸ್​​ಐ ಮತ್ತು ಅರುಣ್ ರಂಗರಾಜನ್ ಐಎಸ್​ಡಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆಯೂ ಅಕ್ರಮ ಸಂಬಂಧದಲ್ಲಿ ಇದ್ದಾಗ ಸಿಕ್ಕಿ ಬಿದ್ದರು. ಆಗ ತಿಳಿ ಹೇಳುವ ಕೆಲಸ ಮಾಡಿದ್ದೆ. ಆದರೂ ಇಬ್ಬರು ಅಕ್ರಮ ಸಂಬಂಧ ಮುಂದುವರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಅಧಿಕಾರ ದುರುಪಯೋಗ ಪಡಿಸಿಕೊಂಡು ಮಹಿಳಾ ಎಎಸ್​​ಐ ಜೊತೆ ನಿರಂತರವಾಗಿ ಸಂಬಂಧ ಮುಂದುವರಿಸಿದ್ದಾರೆ ಎಂದಿದ್ದಾರೆ. ಈ ಸಂಬಂಧ ಸದ್ಯ ಕಾನ್ಸ್​​ಟೇಬಲ್​​ ಕಂಟೆಪ್ಪ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಮತ್ತು ಪತ್ನಿ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಐಪಿಸಿ ಸೆಕ್ಷನ್ 323 , 324 , 498 , 376(2)(b), 342, 504, 506(2), 507, 420, 406, 500, 201, 109, 457 ಅಡಿಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ.

 
 
 
 
 
 
 
 
 
 
 

Leave a Reply