ಪ್ರೆಸಿಡೆನ್ಸಿ ಕಾಲೇಜ್ ನಲ್ಲಿ ವಿದ್ಯಾರ್ಥಿಯಿಂದ ವಿದ್ಯಾರ್ಥಿನಿಗೆ ಚಾಕು ಇರಿತ

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಮರ್ಡರ್ ನಡೆದಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದಿದ್ದಾರೆ.

ಲವ್ ಫೇಲ್ಯೂರ್​ನಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ವಿದ್ಯಾರ್ಥಿನಿ ಲಯಸ್ಮಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಘಟನೆ ರಾಜಾನುಕುಂಟೆಯ ಪ್ರೆಸಿಡೆನ್ಸಿ ಕಾಲೇಜ್ ಕ್ಯಾಂಪಸ್​ನಲ್ಲಿ ನಡೆದಿದೆ. ಪವನ್​ ಕಲ್ಯಾಣ ವಿದ್ಯಾರ್ಥಿನಿಯನ್ನ ಚಾಕುವಿನಿಂದ ಇರಿದಿದ್ದು, ಬಳಿಕ ತಾನು ಕತ್ತು ಸೀಳಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 
 
 
 
 
 
 
 
 
 
 

Leave a Reply