ಪುತ್ತೂರು: ಪ್ರತಿಭಟನೆಯ ಬೆನ್ನಲ್ಲೇ ಮತ್ತೆ ಹೊಡೆದಾಡಿಕೊಂಡ ವಿದ್ಯಾರ್ಥಿಗಳು.

ಪುತ್ತೂರು: ನಿನ್ನೆ ಪುತ್ತೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ, ಕಾಲೇಜಿಗೆ ಸಂಬಂಧಪಡದ ಸಂಘಟನೆ ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುತ್ತಿದ್ದ ಘಟನೆಯನ್ನು ಖಂಡಿಸಿ ಇಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.  
ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ ಎನ್ನಲಾಗಿದ್ದು, ಗಾಯಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಟೆದಾಟದಲ್ಲಿ ಮೂವರು ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ನಂತರ  ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
 
 
 
 
 
 
 
 
 
 
 

Leave a Reply