ರಕ್ಷಿತ್ ಕೋಟ್ಯಾನ್ ಹಲ್ಲೆ ಯತ್ನ~ ಆರೋಪಿ ಬಂಧಿಸಲು ಆಗ್ರಹ

ಉಡುಪಿ: ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲ್ಯಾನ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸ ಲಾಯಿತು.ಸೋಮವಾರ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚೆಗೆ ಉದ್ಯಾವರ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಮೂವರು ಅಪರಿಚಿತರು ಮಾರಕಾಯುಧಗಳಿಂದ ಹಲ್ಲೆ ನಡೆಸಲು ಯತ್ನಿಸಿದ್ದು, ಈ ಬಗ್ಗೆ ಕಾಪು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿಗಳ ಆರೋಪಿ ವಾದಿರಾಜ, ಅಭಿಷೇಕ್, ಮತ್ತು ರಂಜಿತ್ ಎಂಬವರನ್ನು ಬಂಧಿಸಲಾಗಿದೆ.

ಈ‌ ಕೃತ್ಯ ಎಸಗಿದ್ದು, ಸ್ಥಳೀಯ ಕಾಂಗ್ರೆಸ್ ಮುಖಂಡ ನಿತಿನ್ ಜೆ. ಸಾಲಿಯಾನ್ ಎಂಬಾತ ತಮಗೆ ಈ ಕೃತ್ಯ ಎಸಗಲು ಸುಪಾರಿ ಕೊಟ್ಟಿರುವುದಾಗಿ ಹೇಳಿಕೆ ನೀಡಿದ್ದು ಮೂರ್ನಾಲ್ಕು ದಿನಗಳಾದರೂ ನಿತಿನ್ ಸಾಲ್ಯಾನ್ ನನ್ನು ಬಂಧಿಸಿಲ್ಲ. ಇದೀಗ ರಕ್ಷಿತ್ ಕೋಟ್ಯಾನ್ ಹಾಗೂ ಅವರ ಮನೆಯವರಿಗೆ ನಿತಿನ್ ಜೆ. ಸಾಲಿಯಾನ್ ಜೀವ ಬೆದರಿಕೆ ಒಡ್ಡಿದ್ದು ನಟೋರಿಯಸ್ ಕ್ರಿಮಿನಲ್ ಗಳಿಗೆ ಸುಪಾರಿ ನೀಡಿದ ನಿತಿನ್ ಜೆ ಸಾಲಿಯನ್ ನನ್ನು ಕೂಡಲೇ ಬಂಧಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯಕುಮಾರ್‌ ಉದ್ಯಾವರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವಿ ಕೋಟ್ಯಾನ್, ಕಾಪು ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್, ಪ್ರಮುಖರಾದ ಸಂತೋಷ್ ಸುವರ್ಣ, ಜಿತೇಂದ್ರ ಶೆಟ್ಟಿ, ಪ್ರಕಾಶ್ ಕುಮಾರ್, ರಮಾನಂದ, ಪ್ರವೀಣ್ ಪೂಜಾರಿ,

ಉದ್ಯಾವರ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ, ಪ್ರಕಾಶ್ ಟಿ. ಕೋಟ್ಯಾನ್, ರಮೇಶ್ ಕೋಟ್ಯಾನ್, ದಿನೇಶ್ ಸಾಲಿಯಾನ್, ಉಮೇಶ್ ಕರ್ಕೇರ, ರವಿರಾಜ್ ಕುಂದರ್, ಕಿಶೋರ್ ಸಾಲ್ಯಾನ್, ಸಚಿನ್ ಬೊಳ್ಜೆ, ಸತೀಶ್ ಉದ್ಯಾವರ, ಶಿವರಾಮ ಶೆಟ್ಟಿ, ಚಂದ್ರಶೇಖರ, ವಿಠಲ ಕೋಟ್ಯಾನ್ ಮೊದಲಾದವರಿದ್ದರು.

 
 
 
 
 
 
 
 
 
 
 

Leave a Reply