Janardhan Kodavoor/ Team KaravaliXpress
24.6 C
Udupi
Monday, November 28, 2022
Sathyanatha Stores Brahmavara

ಮದ್ಯದ ಅಮಲಿನಲ್ಲಿ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ!

ಚಲಿಸುತ್ತಿದ್ದ ಕಾರಿನಲ್ಲೇ ಪಾನಮತ್ತ ದುಷ್ಕರ್ಮಿಗಳು ಮಾಡೆಲ್‌ ಒಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಈ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಈ ಸಂಬಂಧ ಓರ್ವ ಮಹಿಳೆ ಹಾಗೂ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿ ಮೂವರು ಯುವಕರು ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವ ಮಾಡೆಲ್ ಗುರುವಾರ ರಾತ್ರಿ 8:30 ರ ಸುಮಾರಿಗೆ ತನ್ನ ಸ್ನೇಹಿತನೊಂದಿಗೆ ಕೊಚ್ಚಿಯ ಬಾರ್‌ಗೆ ಬಂದಿದ್ದಾರೆ. ರಾತ್ರಿ 10 ಗಂಟೆಗೆ ಬಾರ್‌ನಲ್ಲಿ ಕುಸಿದು ಬಿದ್ದಿದ್ದಾರೆ. ಇದನ್ನೇ ನೆಪವಾಗಿಟ್ಟುಕೊಂಡ ದುಷ್ಕರ್ಮಿಗಳು ಮನೆಗೆ ತಲುಪಿಸುವುದಾಗಿ ಕರೆದೊಯ್ದು ನಗರದಲ್ಲೆಲ್ಲ ಸುತ್ತಾಡಿಸಿ ಅತ್ಯಾಚಾರವೆಸಗಿದ್ದಾರೆ. ಬಳಿಕ ಯುವತಿಯನ್ನು ಕಾಕ್ಕನಾಡಿನ ಅವರ ಮನೆಯ ಮುಂದೆ ಡ್ರಾಪ್ ಮಾಡಿದ್ದಾರೆ.

ಶುಕ್ರವಾರ ಬೆಳಗ್ಗೆ ರೂಪದರ್ಶಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಮಾಡೆಲ್ ಸ್ನೇಹಿತೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳಾದ ಮೂವರು ಯುವಕರು ಕೊಡುಂಗಲ್ಲೂರು ಮೂಲದವರು ಎಂದು ತಿಳಿದುಬಂದಿದೆ.

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮಾಡೆಲ್ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದು, ಪೊಲೀಸರು ಸಂತ್ರಸ್ತೆಯನ್ನು ಕಲಮಾಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!