Janardhan Kodavoor/ Team KaravaliXpress
23.4 C
Udupi
Saturday, February 4, 2023
Sathyanatha Stores Brahmavara

ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ,ಕೊಲೆ!!

9 ವರ್ಷದ ಬಾಲಕಿಯ ಮೇಲೆ 15 ವರ್ಷದ ಬಾಲಕನೊಬ್ಬ ಅತ್ಯಾಚಾರ ನಡೆಸಿ, ಕೊಲೆಗೈದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ನಡೆದಿದೆ. ಮೃತ ಬಾಲಕಿಯ ತಂದೆಯ ಮೇಲಿನ ಸೇಡಿಗೆ ಅಪ್ರಾಪ್ತ ಆರೋಪಿ ಈ ಕೃತ್ಯ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೇ ನಿಲ್ದಾಣದ ಬಳಿಯಲ್ಲಿರುವ ಕಲ್ಯಾಣಿ ಪಶ್ಚಿಮ ಪ್ರದೇಶದಲ್ಲಿರುವ ವಸತಿ ಪ್ರದೇಶದ ಆವರಣದಲ್ಲಿ 9 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದ್ದು, ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಅಳವಡಿಸಲಾದ ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದಾಗ 15 ವರ್ಷದ ಬಾಲಕ ಈ ಕೃತ್ಯವನ್ನು ನಡೆಸಿರುವುದು ತಿಳಿದುಬಂದಿದೆ. ಆತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ನಂತರದಲ್ಲಿ ಕತ್ತು ಸೀಳಿ ಕೊಲೆ ಮಾಡಿದ್ದ ಎನ್ನುವುದು ತಿಳಿದುಬಂದಿದೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಅಪ್ರಾಪ್ತ ಆರೋಪಿಯನ್ನು ಪೊಲೀಸರು ಗುರುತಿಸಿದ್ದಾರೆ. ನಂತರದಲ್ಲಿ ಬಾಲಕನ ಬಗ್ಗೆ ಸ್ಥಳೀಯರಲ್ಲಿ ವಿಚಾರಣೆ ಮಾಡಲಾಗಿದ್ದು, ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಮಹಾತ್ಮ ಫುಲೆ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಅಪ್ರಾಪ್ತ ಆರೋಪಿ ನಡೆದ ಘಟನೆಯನ್ನು ತಿಳಿಸಿದ್ದಾನೆ. 2 ದಿನಗಳ ಹಿಂದೆ ಆತ ಬಾಲಕಿಯ ತಂದೆಯೊಂದಿಗೆ ಜಗಳವಾಡಿದ್ದು, ಹಲ್ಲೆಗೆ ಒಳಗಾಗಿದ್ದ. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಬಾಲಕ ಆತನ ಅಪ್ರಾಪ್ತ ಮಗಳನ್ನು ಅಪಹರಿಸಿದ್ದು, ನಂತರ ಅತ್ಯಾಚಾರ ನಡೆಸಿ ಬ್ಲೇಡ್‌ನಿಂದ ಕತ್ತು ಸೀಳಿರುವುದಾಗಿ ತಿಳಿಸಿದ್ದಾನೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!