Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಬ್ರಹ್ಮಾವರದ ರೈಸ್‌ಮಿಲ್ ಮೇಲೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ದಾಳಿ,600 ಕ್ವಿಂಟಾಲ್ ಅಧಿಕ ಅಕ್ಕಿ ವಶ

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡ ಇಂದು ಮಧ್ಯಾಹ್ನ ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿ ರೈಸ್‌ಮಿಲ್ ಮೇಲೆ ದಾಳಿ ನಡೆಸಿದ್ದು, ಅನ್ನಭಾಗ್ಯ ಯೋಜನೆಯ ಸುಮಾರು 600 ಕ್ವಿಂಟಾಲ್ ಅಧಿಕ ಅಕ್ಕಿಯನ್ನು ವಶಪಡಿಸಿಕೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಲಾ ಗುತ್ತಿತ್ತು. ಇಂದು ಅಂದಾಜು 16.5 ಲಕ್ಷ ರೂ. ಮೌಲ್ಯದ ಅಕ್ಕಿಯನ್ನು ವಶಕ್ಕೆ ಪಡೆಯಾಲಾಗಿದ್ದು, ಮೂರು ಲಾರಿ ಚಾಲಕರು ಮತ್ತು ಕ್ಲೀನರ್‌ನನ್ನು ಬಂಧಿಸಲಾಗಿದೆ. 6 ಲಾರಿ, ಎರಡು 407, ಒಂದು ಟಾಟಾ 909 ಹಾಗೂ ಮಾರುತಿ ಇಕೋ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಪಡಿತರವನ್ನು ಅಕ್ರಮವಾಗಿ ದಾಸ್ತಾನು ಮಾರಾಟ ಮಾಡುವ ಜಾಲ ಸಕ್ರಿಯವಾಗಿದ್ದು, ಕಳೆದ ತಿಂಗಳು ಕುಂದಾಪುರ ತಾಲೂಕಿನಲ್ಲಿ ಈ ರೀತಿಯ ಜಾಲವನ್ನು ಪತ್ತೆ ಮಾಡಲಾಗಿದೆ, ಜಿಲ್ಲೆಯಲ್ಲಿರುವ ಇಂತಹ ಜಾಲಗಳನ್ನು ಪತ್ತೆ ಹಚ್ಚಲು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು, ಸಾರ್ವಜನಿಕರು ಪಡಿತರ ಅಕ್ಕಿಯ ಅಕ್ರಮ ದಾಸ್ತಾನು, ಸಾಗಾಟ ಕುರಿತು ಮಾಹಿತಿ ಇದ್ದಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿದಲ್ಲಿ ಕೂಡಲೇ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಹಾಗೂ ಸಾರ್ವಜನಿಕರೂ ಸಹ ತಮಗೆ ನೀಡಲಾಗುವ ಅಕ್ಕಿಯನ್ನು ಮಾರಾಟ ಮಾಡದೆ, ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕ ಗಜೇಂದ್ರ, ಆಹಾರ ನಿರೀಕ್ಷಕರಾದ ಪಾರ್ವತಿ, ಸುರೇಶ್ ಮತ್ತಿತರರು ಭಾಗವಹಿಸಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!