ನಾಲ್ಕೈದು ಬಾರಿ ಕೊರೋನಾ ನೆಪವೊಡ್ಡಿ ಹೈ ಡ್ರಾಮಾ ಆಡಿದ್ದ ಸಂಪತ್ ರಾಜ್, ಕೊನೆಗೆ ಹೈ ಕೋರ್ಟ್ಗೆ ಜಾಮೀನು ಅರ್ಜಿ ಪುನಃ ಸಲ್ಲಿಸಿದ್ದ. ಆದ್ರೆ ಎಸ್ ಓಖಾ ವಿಭಾಗೀಯ ಪೀಠ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಅಲ್ಲದೆ ಈ ಪ್ರಕರಣ ಸಂಬಂಧ ಸಿಸಿಬಿ ತನಿಖಾಧಿಕಾರಿಗಳನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.
ಹೀಗಾಗಿ ತಮ್ಮ ತನಿಖೆಯ ವೇಗ ಹೆಚ್ಚಿಸಿದ ಸಿಸಿಬಿ ಅಧಿಕಾರಿಗಳು ಕೊನೆಗೂ ಈಗ ಸಂಪತ್ ರಾಜ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮಧ್ಯೆ ಸಿಸಿಬಿ ಅಧಿಕಾರಿಗಳು 50 ಪುಟಗಳ ಮಧ್ಯಂತರ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು.
ಇಷ್ಟೂ ದಿನ ಖಾಕಿ ಕಣ್ಣಿಗೆ ಬೀಳದ ಸಂಪತ್ ರಾಜ್ ಅಡಗಿ ಕೂತಿದ್ದು ಎಲ್ಲಿ ಅನ್ನೋದು ಕುತೂಹಲದ ಪ್ರಶ್ನೆ. ಆದರೆ ಸಿಸಿಬಿ ಮೂಲಗಳ ಪ್ರಕಾರ, ಈತ ತಲೆ ಮರೆಸಿಕೊಂಡು ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ಹಲವು ಭಾಗದಲ್ಲಿ ಕೂತಿದ್ದನಂತೆ. ಒಂದು ಕಡೆ ಎರಡು ದಿನಕ್ಕಿಂತ ಹೆಚ್ಚು ಎಲ್ಲಿಯೂ ಕೂರುತ್ತಿರಲಿಲ್ಲ. ಇದರ ಅರಿವು ಸಿಸಿಬಿ ಅಧಿಕಾರಿಗಳಿಗೆ ಇದ್ದಿದ್ದರೂ ಬಂಧಿಸೋಕೆ ಸಾಧ್ಯ ಆಗಿರಲಿಲ್ಲವಂತೆ.
ನಿನ್ನೆ ಬೆಂಗಳೂರಿನ ಬೆನ್ಸನ್ ಟೌನ್ ಬಳಿಯ ತನ್ನ ಸ್ನೇಹಿತನ ನಿವಾಸಕ್ಕೆ ಬಂಧಿದ್ದ ವೇಳೆ ಸಿಸಿಬಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಬಹಳ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿ ರಾತ್ರಿ 10ಕ್ಕೆ ಈತನನ್ನು ಬಂಧಿಸಿದ್ದಾರೆ. ಸದ್ಯ ಸಿಸಿಬಿ ವಶದಲ್ಲಿರುವ ಸಂಪತ್ ರಾಜ್ನನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.