Janardhan Kodavoor/ Team KaravaliXpress
27 C
Udupi
Wednesday, December 2, 2020

ಗಾಂಜಾ ಸಾಗಾಟ ಮತ್ತು ಮಾರಾಟಗಾರರರಿಗೆ ಉಡುಪಿ ಜಿಲ್ಲಾ ಎಸ್ಪಿಯಿಂದ ಖಡಕ್ ಸಂದೇಶ 

ಉಡುಪಿ : ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡನ್ನು ಬುಧವಾರ ಉಡುಪಿ ಚಂದು  ಮೈದಾನದಲ್ಲಿ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶ್ರೀ ಎನ್. ವಿಷ್ಣುವರ್ಧನ್ ಐ.ಪಿ.ಎಸ್.,ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಪೊಲೀಸ್ ಉಪ ವಿಭಾಗಾಧಿಕಾರಿ ಶ್ರೀ ಟಿ.ಆರ್. ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿ.ವೈ.ಎಸ್.ಪಿ.ರಾಘವೇಂದ್ರ ಉಡುಪಿ, ವೃತ್ತ ನಿರೀಕ್ಷಕ ಮಂಜುನಾಥ್ ಹಾಗು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಸದ್ರಿ ಪರೇಡ್‌ನಲ್ಲಿ ಉಪಸ್ಥಿತರಿದ್ದರು.
ಪರೇಡ್‌ನಲ್ಲಿ ಬೈಂದೂರು ಠಾಣಾ ವ್ಯಾಪ್ತಿಯಿಂದ ಇಬ್ಬರು, ಕುಂದಾಪುರ ಠಾಣಾ ವ್ಯಾಪ್ತಿಯಿಂದ 18ಜನ, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ 4 ಜನ, ಕೋಟಾ ಠಾಣಾ ವ್ಯಾಪ್ತಿಯಿಂದ ಇಬ್ಬರು, ಉಡುಪಿ ನಗರ ಠಾಣಾ ವ್ಯಾಪ್ತಿಯಿಂದ 12jಜನ,  ಮಲ್ಪೆ ಠಾಣಾ ವ್ಯಾಪ್ತಿ ಯಿಂದ 5 ಜನ, ಮಣಿಪಾಲ ಠಾಣಾ ವ್ಯಾಪ್ತಿಯಿಂದ16 ಜನ,  ಸೆನ್ ಠಾಣಾ ವ್ಯಾಪ್ತಿಯಿಂದ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿಯಿಂದ ಇಬ್ಬರು, ಪಡುಬಿದ್ರಿ ಠಾಣಾ ವ್ಯಾಪ್ತಿಯಿಂದ 5 ಜನ, ಕಾಪು ಠಾಣಾ ವ್ಯಾಪ್ತಿಯಿಂದ 3ಜನ ಹಾಗೂ ಹಿರಿಯಡ್ಕ ಠಾಣಾ ವ್ಯಾಪ್ತಿಯಿಂದ ಓರ್ವ ಒಟ್ಟು 27 ಜನ ಆರೋಪಿತರು ಹಾಜರಿದ್ದರು.
ಪರೇಡ್‌ನಲ್ಲಿ ಭಾಗವಹಿಸಿದ್ದ ಆರೋಪಿತರನ್ನು ಉದ್ದೇಶಿಸಿ, ಪೊಲೀಸ್ ವರಿಷ್ಟಾಧಿಕಾರಿ ಮಾತನಾಡಿ ಸಮಾಜದ ಸ್ವಾಸ್ಥವನ್ನು ಕಾಪಾಡುವ ನಿಟ್ಟಿನಲ್ಲಿ ಇನ್ನು ಮುಂದಕ್ಕೆ ಇಂತಹ ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಭಾಗವಹಿಸದೆ ಉತ್ತಮ ರೀತಿಯಲ್ಲಿ ಜೀವನ ನಡೆಸಲು ಕರೆ ನೀಡಿದರು.
ಅಲ್ಲದೇ ಇದೇ ವೇಳೆ ಇನ್ನು ಮುಂದಕ್ಕೆ ಇಂತಹ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಹೋದಲ್ಲಿ ಕಠಿಣ ಕಾನೂನು ಕ್ರಮದ ಎಚ್ಚರಿಕೆ ಯನ್ನೂ ಸಹ ನೀಡಿದರು ಹಾಗೂ ಮಾದಕ ದ್ರವ್ಯ ಸಾಗಾಟ / ಮಾರಾಟಗಾರರ ಮಾಹಿತಿಯನ್ನು  ನೀಡಿದಲ್ಲಿ ಮಾಹಿತಿ ನೀಡಿದವರ ವಿವರವನ್ನು ಗುಪ್ತವಾಗಿ ಇಡಲಾಗುವುದೆಂದು ತಿಳಿಸಿದರು.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಡಿಕೆಶಿ~ಪ್ರಮೋದ್ ಬೇಟಿ, ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶೀಘ್ರವೇ ನಾಮಕರಣ ಎಂದ ನಳಿನ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ಮತ್ತು ಕನ್ಯಾಡಿ ಶ್ರೀಗಳೊಂದಿಗೆ ಚರ್ಚಿಸಿ "ಕೋಟಿ ಚೆನ್ನಯರ" ಹೆಸರಿಡಲು ನಿಯಮಾವಳಿಗಳ ಅಡಿಯಲ್ಲಿ ಸೂಕ್ತ ಕ್ರಮವನ್ನು ಜರುಗಿಸಲಾಗುವುದು...

ಹತಾಶ ಮಾಜಿ ಮುಖ್ಯಮಂತ್ರಿಗ​ಳಿಂದ ಮುಂದುವರಿದ ಅಪ್ರಬುದ್ಧ ಹೇಳಿಕೆಗಳು​~ ಕ್ಯಾಪ್ಟನ್ ಗಣೇಶ್ ಕಾರ್ಣಿಕ್​. 

ಬೆಂಗಳೂರು: ಲವ್ ಜಿಹಾದ್ ವಿರುದ್ಧ ಕಾನೂನು ತರುವ ಸರಕಾರದ ಪ್ರಯತ್ನದ ವಿರುದ್ಧ ಮಾನ್ಯ​ ಮಾಜಿ ಮುಖ್ಯಮಂತ್ರಿಗಳ ಹೇಳಿಕೆ ಸಂವಿಧಾನ ವಿರೋಧಿ ಮ​ತ್ತು ಪ್ರಜಾಪ್ರಭುತ್ವ ವಿರೋಧಿ ಎಮಾಧ್ಯಮ ವಕ್ತಾರರು ಮತ್ತು ವಿಧಾನಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್...

ಬಾಲಕಿಯರ ಸರಕಾರಿ ಪ ಪೂ ಕಾಲೇಜಿನ ಎರಡು ಅಂತಸ್ತಿನ ನೂತನ ಕಟ್ಟಡವನ್ನು ಉದ್ಘಾಟನೆ 

ನಬಾರ್ಡ್ ಸಹಯೋಗದ ಅರ್ ಐ ಡಿ ಎಪ್ ಯೋಜನೆಯಡಿಯಲ್ಲಿ ರೂಪೈ ಒಂದು ಕೋಟಿ ಎಂಟು ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಪಿ ಬಾಲಕಿಯರ ಸರಕಾರಿ ಪ ಪೂ ಕಾಲೇಜಿನ ಎರಡು ಅಂತಸ್ತಿನ ನೂತನ...

ಸುಗಮ ಚುನಾವಣೆಗೆ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ: ಡಿಸಿ ಜಿ.ಜಗದೀಶ್

ಉಡುಪಿ:  ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಎರಡು ಹಂತದ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು, ಸುಗಮವಾಗಿ ಮತ್ತು ಯಾವುದೇ ಲೋಪಗಳಿಲ್ಲದೇ ನಡೆಸಲು ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯಂತೆ ಕಾರ್ಯ...
error: Content is protected !!