ಮಂಗಳೂರು: ಲಾಡ್ಜ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಾಗಿದೆ.
 
 ಮೃತ ವಿದ್ಯಾರ್ಥಿನಿಯನ್ನು ಕಾಸರಗೋಡು ಮೂಲದ ಅಮೃತ ( 27 ) ಎಂದು ಗುರುತಿಸಲಾಗಿದೆ.
 
ಈಕೆ ಕಳೆದ ಕೆಲ ಸಮಯದಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದು, ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದು ನಗರದ ಲಾಡ್ಜ್ ಒಂದರಲ್ಲಿ ರೂಮ್ ಬಾಡಿಗೆ ಪಡೆದು, ಆತ್ಮಹತ್ಯೆಗೂ ಮುನ್ನ ತನ್ನ ಗೆಳತಿಗೆ ಸಂದೇಶ ರವಾನಿಸಿದ್ದರು ಎನ್ನಲಾಗಿದೆ .
 
ವಿಷಯ ತಿಳಿಯುತ್ತಿದ್ದಂತೆ ಗೆಳತಿ ಹಾಗೂ ಇನ್ನಿತರರು ಲಾಡ್ಜ್ ಗೆ ಆಗಮಿಸಿದ್ದು, ಅದಾಗಲೇ ಅಮೃತ ಆತ್ಮಹತ್ಯೆಗೆ ಶರಣಾಗಿದ್ದಳು ಎಂದು ತಿಳಿದುಬಂದಿದೆ .
 
ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಯ ಕುರಿತು ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
 
 
 
 
 
 
 
 
 
 
 

Leave a Reply